ಅತ್ಯಾಚಾರ ಪ್ರಕರಣ: ಅಸಾರಾಂ ಬಾಪುಗೆ ಜಾಮೀನು ನಿರಾಕರಿಸಿದ ರಾಜಸ್ಥಾನ ಹೈಕೋರ್ಟ್

ತಾನು 83 ವರ್ಷ ವಯಸ್ಸಿನ ವಯೋವೃದ್ಧ ಹಾಗೂ ಹಲವು ಕಾಯಿಲೆಗಳಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕೆಂದು ಅಸಾರಾಂ ಮನವಿ ಸಲ್ಲಿಸಿದ್ದರು.
Asaram Bapu, Rajasthan High Court
Asaram Bapu, Rajasthan High Court
Published on

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಶಿಕ್ಷೆ ಅಮಾನತುಗೊಳಿಸುವಂತೆ ಕೋರಿ ಸ್ವಘೋಷಿತ ದೇವಮಾನವ ಅಸಾರಾಂ ಬಾಪು ಸಲ್ಲಿಸಿದ್ದ ಮನವಿಯನ್ನು ರಾಜಸ್ಥಾನ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ. [ಅಸರಾಂ ಅಲಿಯಾಸ್‌ ಅಸುಮಲ್ ಮತ್ತು ರಾಜಸ್ಥಾನ ಸರ್ಕಾರ ನಡುವಣ ಪ್ರಕರಣ].

ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕಾಗಿ ಜೀವಾವಧಿ ಶಿಕ್ಷೆಗೆ ಗುರಿಯಾದ ಬಳಿಕ ಅಸಾರಾಂ ಸಲ್ಲಿಸಿದ್ದ ಮೂರನೇ ಅರ್ಜಿಯನ್ನು ನ್ಯಾಯಮೂರ್ತಿಗಳಾದ ವಿನೀತ್ ಕುಮಾರ್ ಮಾಥುರ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ವಿಭಾಗೀಯ ಪೀಠ ತಿರಸ್ಕರಿಸಿತು.

Also Read
ಅಸಾರಾಂ ಬಾಪು ಅತ್ಯಾಚಾರ ಪ್ರಕರಣ: ಜಾಮೀನು ವಿರೋಧಿಸಿ ಸುಪ್ರೀಂ ಕೋರ್ಟ್‌ ಕದತಟ್ಟಿದ ಸಂತ್ರಸ್ತೆಯ ತಂದೆ

ತಾನು 83 ವರ್ಷ ವಯಸ್ಸಿನ ವಯೋವೃದ್ಧ ಹಾಗೂ ಹಲವು ಕಾಯಿಲೆಗಳಿಂದ ಬಳಲುತ್ತಿದ್ದೇನೆ. 9 ವರ್ಷ 7 ತಿಂಗಳ ಸುದೀರ್ಘ ಕಾಲ ಜೈಲಿನಲ್ಲಿದ್ದೇನೆ. ಕೇವಲ ಸಂತ್ರಸ್ತೆಯ ಹೇಳಿಕೆಯಿಂದಲೇ ತಾನು ಪ್ರಕರಣದ ಅಪರಾಧಿಯಲ್ಲ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಹೀಗಾಗಿ ಜಾಮೀನು ನೀಡುವಂತೆ ಅಸಾರಾಂ ಕೋರಿದ್ದರು.

ಆದರೆ ಅರ್ಜಿಯನ್ನು ಪುರಸ್ಕರಿಸಲು ಸೂಕ್ತ ಆಧಾರಗಳಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು. 2013ರ ಆಗಸ್ಟ್‌ನಲ್ಲಿ ಜೋಧ್‌ಪುರದ ಮನೈ ಗ್ರಾಮದಲ್ಲಿಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಅಸಾರಾಂ ಬಾಪು ಅವರನ್ನು ಬಂಧಿಸಲಾಗಿತ್ತು.

Kannada Bar & Bench
kannada.barandbench.com