Vidhana Soudha
ಸುದ್ದಿಗಳು
ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ: ಅರ್ಧ ದಿನ ರಜೆಗೆ ಸಿಎಂ ಸಿದ್ದರಾಮಯ್ಯಗೆ ಎಎಬಿ ಮನವಿ
ಕೇಂದ್ರ ಸರ್ಕಾರವು ಜನವರಿ 22ರಂದು ಅರ್ಧ ದಿನ ರಜೆ ಘೋಷಣೆ ಮಾಡಿದೆ. ಈ ನೆಲೆಯಲ್ಲಿ ತಾವೂ ಸಹ ರಾಜ್ಯದ ಜನರ ಭಾವನೆಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಎಎಬಿ ಕೋರಿದೆ.
ಅಯೋಧ್ಯೆಯಲ್ಲಿ ಜನವರಿ 22ರಂದು ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಅರ್ಧ ಅಥವಾ ಪೂರ್ತಿ ದಿನ ರಜೆ ಘೋಷಿಸುವಂತೆ ಬೆಂಗಳೂರು ವಕೀಲರ ಸಂಘವು (ಎಎಬಿ) ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.
ರಾಜ್ಯದ ಜನರು ಅಯೋಧ್ಯೆಯಲ್ಲಿ ನಡೆಯಲಿರುವ ಕಾರ್ಯಕ್ರಮ ವೀಕ್ಷಿಸಲು ಕಾತರರಾಗಿದ್ದಾರೆ. ಕೇಂದ್ರ ಸರ್ಕಾರವು ಇದಾಗಲೇ ಜನವರಿ 22ರಂದು ಅರ್ಧ ದಿನ ರಜೆ ಘೋಷಣೆ ಮಾಡಿದೆ. ಈ ನೆಲೆಯಲ್ಲಿ ತಾವೂ ಸಹ ರಾಜ್ಯದ ಜನರ ಭಾವನೆಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಕೋರಲಾಗಿದೆ.
ತನ್ನ ಆದರ್ಶಯುತ ಬದುಕಿನ ಮೂಲಕ ಭಾರತ ಸಮಾಜವನ್ನು ಪ್ರಭಾವಿಸಿರುವ ರಾಮದೇವರ ಪ್ರಭಾವಕ್ಕೆ ರಾಜ್ಯದ ಬಹುತೇಕ ಜನರು ಒಳಗಾಗಿದ್ದಾರೆ ಎಂದು ಎಎಬಿ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


