ರಮೇಶ್‌ ಜಾರಕಿಹೊಳಿ ಸಿ ಡಿ ಪ್ರಕರಣ: ಲಿಖಿತ ವಾದ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ನಿಂದ ಕೊನೆಯ ಅವಕಾಶ

ಈಗಾಗಲೇ ಸಾಕಷ್ಟು ಸಮಯ ನೀಡಲಾಗಿದೆ. ಆದರೂ ಲಿಖಿತ ವಾದಾಂಶ ಸಲ್ಲಿಸಲು ವಿಳಂಬ ಮಾಡಲಾಗುತ್ತಿದೆ ಎಂದು ಸರ್ಕಾರದಿಂದ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ.
Ramesh Jarakiholi and Karnataka HC
Ramesh Jarakiholi and Karnataka HC

ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸಿ ಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಲಿಖಿತ ವಾದಾಂಶ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಕೊನೆಯದಾಗಿ ಎರಡು ವಾರ ಕಾಲಾವಕಾಶ ನೀಡಿದೆ.

ಎಸ್‌ಐಟಿ ರಚನೆಯ ಸಿಂಧುತ್ವ ಪ್ರಶ್ನಿಸಿ ಸಂತ್ರಸ್ತೆ ಹಾಗೂ ಇತರರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

Also Read
ರಮೇಶ್‌ ಜಾರಕಿಹೊಳಿ ಸಿ ಡಿ ಪ್ರಕರಣ: ವಿಚಾರಣೆ ಸಾರಾಂಶ, ಆಕ್ಷೇಪಣೆ ಸಲ್ಲಿಸಲು ಪಕ್ಷಕಾರರಿಗೆ ಹೈಕೋರ್ಟ್‌ ನಿರ್ದೇಶನ

ಸರ್ಕಾರದ ಪರ ವಕೀಲರು ಹಾಜರಾಗಿ, ಲಿಖಿತ ವಾದಾಂಶ ಮತ್ತು ಪ್ರಕರಣ ವಿವರಗಳನ್ನು ಸಂಕ್ಷಿಪ್ತ ರೂಪದಲ್ಲಿ ಸಲ್ಲಿಸಲು ಕಾಲಾವಕಾಶ ನೀಡುವಂತೆ ಕೋರಿದರು. ಇದಕ್ಕೆ ಆಕ್ಷೇಪಿಸಿದ ಪೀಠವು ಈಗಾಗಲೇ ಸಾಕಷ್ಟು ಸಮಯ ನೀಡಲಾಗಿದೆ. ಆದರೂ ಲಿಖಿತ ವಾದಾಂಶ ಸಲ್ಲಿಸಲು ವಿಳಂಬ ಮಾಡಲಾಗುತ್ತಿದೆ ಎಂದಿತು.

ನಂತರ ಸರ್ಕಾರಿ ವಕೀಲರ ಮನವಿ ಮೇರೆಗೆ ಲಿಖಿತ ವಾದಾಂಶ ಮತ್ತು ಪ್ರಕರಣ ವಿವರವನ್ನು ಸಂಕ್ಷಿಪ್ತ ರೂಪದಲ್ಲಿ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಿ ವಿಚಾರಣೆಯನ್ನು ಡಿಸೆಂಬರ್‌ 15ಕ್ಕೆ ಮುಂದೂಡಿದೆ.

Related Stories

No stories found.
Kannada Bar & Bench
kannada.barandbench.com