ಅತ್ಯಾಚಾರ ಪ್ರಕರಣ: ವಕೀಲ ಜಿ ದೇವರಾಜೇಗೌಡಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌

ಹಾಸನದ ನಿವಾಸಿ ಜಿ ದೇವರಾಜೇಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಂ ಜಿ ಉಮಾ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ. ಜಾಮೀನು ಮಂಜೂರಾತಿಗೆ ವಿಧಿಸಿರುವ ಷರತ್ತುಗಳನ್ನು ಒಳಗೊಂಡ ಆದೇಶ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.
D Devarajegowda and HC
D Devarajegowda and HC

ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ವಕೀಲ ಜಿ ದೇವರಾಜೇಗೌಡ ಅವರಿಗೆ ಕರ್ನಾಟಕ ಹೈಕೋರ್ಟ್‌ ಸೋಮವಾರ ಜಾಮೀನು ಮಂಜೂರು ಮಾಡಿದೆ.

ಹಾಸನದ ನಿವಾಸಿ ಜಿ ದೇವರಾಜೇಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಂ ಜಿ ಉಮಾ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ. ಜಾಮೀನು ಮಂಜೂರಾತಿಗೆ ವಿಧಿಸಿರುವ ಷರತ್ತುಗಳನ್ನು ಒಳಗೊಂಡ ಆದೇಶ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ಹಾಸನ ಜಿಲ್ಲಾ ವಿಚಾರಣಾಧೀನ ನ್ಯಾಯಾಲಯವು ದೇವರಾಜೇಗೌಡಗೆ ಜೂನ್‌ 5ರಂದು ಜಾಮೀನು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಮಹಿಳೆಯೊಬ್ಬರು ಹೊಳೆನರಸೀಪುರ ನಗರ ಠಾಣೆಯಲ್ಲಿ 2024ರ ಏಪ್ರಿಲ್‌ 1ರಂದು ದೇವರಾಜೇಗೌಡ ಅವರ ವಿರುದ್ಧ ಲೈಂಗಿಕ ದೌರ್ಜನ್ಯ, ಅತ್ಯಾಚಾರದ ದೂರು ದಾಖಲಿಸಿದ್ದರು.

Also Read
ಲೈಂಗಿಕ ದೌರ್ಜನ್ಯ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ ಕದತಟ್ಟಿದ ವಕೀಲ ದೇವರಾಜೇಗೌಡ

ಸಂತ್ರಸ್ತೆ ದೂರು ಆಧರಿಸಿ ಹೊಳೆನರಸೀಪುರ ಟೌನ್‌ ಠಾಣೆಯಲ್ಲಿ ದೇವರಾಜೇಗೌಡ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 354(ಎ), 354(ಬಿ), 354(ಸಿ), 448, 504, 506 ಜೊತೆಗೆ ಸೆಕ್ಷನ್‌ 34 ಅಡಿ ಹಾಗೂ ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 66(ಇ) ಅಡಿ ಪ್ರಕರಣ ದಾಖಲಿಸಲಾಗಿತ್ತು. ಆನಂತರ ಹೆಚ್ಚುವರಿಯಾಗಿ ಐಪಿಸಿ ಸೆಕ್ಷನ್‌ಗಳಾದ 354(ಡಿ) ಮತ್ತು 376(1) ಅನ್ನು ಎಫ್‌ಐಆರ್‌ಗೆ ಸೇರ್ಪಡೆ ಮಾಡಲಾಗಿತ್ತು.

Kannada Bar & Bench
kannada.barandbench.com