ಅತ್ಯಾಚಾರ ಪ್ರಕರಣದಲ್ಲಿನ ತನಿಖೆಗಾಗಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 18ರವರೆಗೆ ಬೆಂಗಳೂರಿನ ಜನಪ್ರತಿನಿಧಿಗಳ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ವಿಶೇಷ ತನಿಖಾ ದಳದ ಕಸ್ಟಡಿಗೆ (ಎಸ್‌ಐಟಿ) ನೀಡಿದೆ.
ಪರಪ್ಪನ ಕೇಂದ್ರ ಕಾರಾಗೃಹದಲ್ಲಿದ್ದ ಪ್ರಜ್ವಲ್ ಅವರನ್ನು ಬಾಡಿ ವಾರೆಂಟ್ ಮೇಲೆ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ಕೆ ಎನ್ ಶಿವಕುಮಾರ್ ಅವರ ಮುಂದೆ ಬುಧವಾರ ಹಾಜರುಪಡಿಸಿದರು.
ಪ್ರಕರಣದ ಕುರಿತು ಮಾಹಿತಿ ಪಡೆದ ನ್ಯಾಯಾಲಯವು ಪ್ರಜ್ವಲ್ ಅವರನ್ನು ಆರು ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿದೆ.
ಜೂನ್ 11ರಂದು ನ್ಯಾಯಾಲಯವು ಪ್ರಜ್ವಲ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಇದಕ್ಕೂ ಮುನ್ನ ಅವರು ಒಟ್ಟು 10 ದಿನ ಎಸ್‌ಐಟಿ ಕಸ್ಟಡಿಯಲ್ಲಿದ್ದರು.