ಸಿಎಎ ಪ್ರತಿಭಟನೆ, ದೆಹಲಿ ಗಲಭೆ ವೇಳೆ ಸಾರ್ವಜನಿಕ ಆಸ್ತಿಗೆ ಹಾನಿ: ದೆಹಲಿ ಹೈಕೋರ್ಟ್ ನೋಟಿಸ್‌ [ಚುಟುಕು]

ಸಿಎಎ ಪ್ರತಿಭಟನೆ, ದೆಹಲಿ ಗಲಭೆ ವೇಳೆ ಸಾರ್ವಜನಿಕ ಆಸ್ತಿಗೆ ಹಾನಿ: ದೆಹಲಿ ಹೈಕೋರ್ಟ್ ನೋಟಿಸ್‌ [ಚುಟುಕು]
A1
Published on

ದೆಹಲಿ ಗಲಭೆ ಪ್ರಕರಣ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯಿದೆಗಳ ವಿರುದ್ಧ ನಡೆದ ಪ್ರತಿಭಟನೆಗಳ ವೇಳೆ ಸಾರ್ವಜನಿಕ ಆಸ್ತಿಗೆ ಹಾನಿ ಉಂಟು ಮಾಡಿರುವವರಿಂದ ಪರಿಹಾರ ವಸೂಲಿ ಮಾಡುವಂತೆ ಕೋರಿದ್ದ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಸೋಮವಾರ ನೋಟಿಸ್‌ ನೀಡಿದೆ.

ಕೇಂದ್ರ ಸರ್ಕಾರ, ದೆಹಲಿ ಸರ್ಕಾರ ಹಾಗೂ ದೆಹಲಿ ಪೊಲೀಸ್‌ ಕಮಿಷನರ್‌ ಅವರಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಹಾನಿಯ ಪ್ರಮಾಣ ಅಂದಾಜಿಸಿ ವ್ಯಕ್ತಿಗಳಿಂದ ಆ ಹಣ ವಸೂಲಿ ಮಾಡಲು ಆಯೋಗ ಸ್ಥಾಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿತ್ತು. ಅರ್ಜಿಯ ಮುಂದಿನ ವಿಚಾರಣೆ ಸೆಪ್ಟೆಂಬರ್ 21ಕ್ಕೆ ನಿಗದಿಯಾಗಿದೆ.

ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್‌ ಗಮನಿಸಿ.

Kannada Bar & Bench
kannada.barandbench.com