ರೇಣುಕಾಸ್ವಾಮಿ ಕೊಲೆ ಪ್ರಕರಣ: ಅನುಕುಮಾರ್‌, ರಾಘವೇಂದ್ರ, ವಿನಯ್‌ ಅರ್ಜಿ ವಜಾಗೊಳಿಸಿದ ಬೆಂಗಳೂರು ನ್ಯಾಯಾಲಯ

ರಾಘವೇಂದ್ರ ಹಾಗೂ ಪವನ್‌ ತಮ್ಮ ಅರ್ಜಿಗಳನ್ನು ಹಿಂಪಡೆದುಕೊಂಡಿದ್ದಾರೆ. ಅದರ ಆಧಾರದ ಮೇಲೆ ಅವರ ಅರ್ಜಿಗಳನ್ನು ವಜಾಗೊಳಿಸಿ ನ್ಯಾಯಾಲಯ ಆದೇಶಿಸಿದೆ.
City civil court, Bengaluru
City civil court, Bengaluru
Published on

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿನ ಐವರು ಸಹ ಆರೋಪಿಗಳ ಜಾಮೀನು ಅರ್ಜಿಗಳನ್ನು ವಜಾಗೊಳಿಸಿ ಬೆಂಗಳೂರಿನ ಸತ್ರ ನ್ಯಾಯಾಲಯ ಬುಧವಾರ ಆದೇಶಿಸಿದೆ.

ಜಾಮೀನು ಕೋರಿ ಮೂರನೇ ಆರೋಪಿ ಪುಟ್ಟಸ್ವಾಮಿ ಅಲಿಯಾಸ್‌ ಪವನ್‌, 4ನೇ ಆರೋಪಿ ಎನ್‌ ರಾಘವೇಂದ್ರ, 7ನೇ ಆರೋಪಿ ಅನುಕುಮಾರ್‌, 10ನೇ ಆರೋಪಿ ವಿನಯ್‌ ಮತ್ತು 14ನೇ ಆರೋಪಿ ಪ್ರದೋಷ್‌ ಅವರು ಸಲ್ಲಿಸಿದ್ದ ಅರ್ಜಿಗಳನ್ನು ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜೈಶಂಕರ್‌ ತಿರಸ್ಕರಿಸಿದ್ದಾರೆ.

Also Read
ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ನಟ ದರ್ಶನ್‌

ಮೆರಿಟ್‌ ಆಧಾರದಲ್ಲಿ ಅನುಕುಮಾರ್‌, ಎನ್‌ ರಾಘವೇಂದ್ರ ಮತ್ತು ವಿನಯ್‌ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ರಾಘವೇಂದ್ರ ಹಾಗೂ ಪವನ್‌ ತಮ್ಮ ಅರ್ಜಿಗಳನ್ನು ಹಿಂಪಡೆದುಕೊಂಡಿದ್ದಾರೆ. ಅದರ ಆಧಾರದ ಮೇಲೆ ಅವರ ಅರ್ಜಿಗಳನ್ನು ವಜಾಗೊಳಿಸಿ ನ್ಯಾಯಾಲಯ ಆದೇಶಿಸಿದೆ. ವಿಸ್ತೃತ ಆದೇಶ ಪ್ರತಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ಇದೇ ಪ್ರಕರಣದಲ್ಲಿ ಪವಿತ್ರಾ ಗೌಡ (ಎ-1), ದರ್ಶನ್‌ (ಎ-2), ದರ್ಶನ್‌ ಕಾರು ಚಾಲಕ ಲಕ್ಷ್ಮಣ್‌ (ಆರೋಪಿ-12) ಹಾಗೂ ಮ್ಯಾನೇಜ್‌ ನಾಗರಾಜ್‌ (ಆರೋಪಿ-11) ಅವರ ಜಾಮೀನು ಅರ್ಜಿಗಳನ್ನು ವಜಾಗೊಳಿಸಿ ಸತ್ರ ನ್ಯಾಯಾಲಯ ಈಚೆಗೆ ಆದೇಶಿಸಿತ್ತು. ಇದೇ ವೇಳೆ ರವಿಶಂಕರ್‌ (ಎ-8) ಮತ್ತು ದೀಪಕ್‌ಗೆ (ಎ-13) ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

Kannada Bar & Bench
kannada.barandbench.com