ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಂ ಪಿ ಚಿನ್ನಪ್ಪ ನಿಧನ

ಕರ್ನಾಟಕ ನ್ಯಾಯಾಂಗ ಅಕಾಡೆಮಿ ಆಡಳಿತ ಮಂಡಳಿಯ ಸದಸ್ಯರಾಗಿ ಕೂಡ ಅವರು ಕರ್ತವ್ಯ ನಿರ್ವಹಿಸಿದ್ದರು.
ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಂ ಪಿ ಚಿನ್ನಪ್ಪ ನಿಧನ
Justice MP chinappa

ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಂ ಪಿ ಚಿನ್ನಪ್ಪ ಸೋಮವಾರ ನಿಧನ ಹೊಂದಿದರು.

1941ರ ಜೂನ್ 1ರಂದು ಜನಿಸಿದ ನ್ಯಾ. ಚಿನ್ನಪ್ಪ ಅವರು 1968ರಲ್ಲಿ ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು. ಮುಂದೆ ಅವರು 1983ರಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಂಡರು. ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್ (ನ್ಯಾಯಾಂಗ) ಮತ್ತು ರಿಜಿಸ್ಟ್ರಾರ್ ಜನರಲ್ ಆಗಿಯೂ ಅವರು ಸೇವೆ ಸಲ್ಲಿಸಿದ್ದರು.

1995ರಲ್ಲಿ ನ್ಯಾ. ಚಿನ್ನಪ್ಪ ಅವರು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕವಾದರು. 2013ರಲ್ಲಿ ಹೈಕೋರ್ಟ್‌ನಿಂದ ನಿವೃತ್ತಿ ಹೊಂದಿದರು. ಕರ್ನಾಟಕ ನ್ಯಾಯಾಂಗ ಅಕಾಡೆಮಿ ಆಡಳಿತ ಮಂಡಳಿಯ ಸದಸ್ಯರಾಗಿ ಕೂಡ ಅವರು ಕರ್ತವ್ಯ ನಿರ್ವಹಿಸಿದ್ದರು.

ನಿವೃತ್ತಿಯ ನಂತರ ರಾಜ್ಯ ಪೊಲೀಸ್ ದೂರು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದರು. ಕರ್ನಾಟಕ ಮಧ್ಯಸ್ಥಿಕೆ ಕೇಂದ್ರದ ಸದಸ್ಯರಾಗಿ ಮತ್ತು ಮಧ್ಯಸ್ಥದಾರರ ಸಮಿತಿಯ ಭಾಗವಾಗಿ ನ್ಯಾ. ಚಿನ್ನಪ್ಪ ಅವರು ಗಮನಾರ್ಹ ಸೇವೆ ಸಲ್ಲಿಸಿದ್ದರು.

No stories found.
Kannada Bar & Bench
kannada.barandbench.com