ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸಂಜಯ್ ರಾಯ್ ವಿರುದ್ಧ ಆರೋಪ ನಿಗದಿಪಡಿಸಿದ ಪ. ಬಂಗಾಳ ನ್ಯಾಯಾಲಯ

ಸಂತ್ರಸ್ತೆ ಆಗಸ್ಟ್ 9ರಂದು ಆರ್ ಜಿ ಕರ್ ವೈದ್ಯಕೀಯ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಘಟನೆ ರಾಷ್ಟ್ರವ್ಯಾಪಿ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಗಿತ್ತು.
ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸಂಜಯ್ ರಾಯ್ ವಿರುದ್ಧ ಆರೋಪ ನಿಗದಿಪಡಿಸಿದ ಪ. ಬಂಗಾಳ ನ್ಯಾಯಾಲಯ
Published on

ಕೊಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ಪಡೆಯುತ್ತಿದ್ದ 31 ವರ್ಷದ ಸ್ಥಾನಿಕ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸಂಜಯ್ ರಾಯ್ ವಿರುದ್ಧ ಪಶ್ಚಿಮ ಬಂಗಾಳದ ನ್ಯಾಯಾಲಯ ಆರೋಪ ನಿಗದಿಪಡಿಸಿದೆ.

ಸೀಲ್ದಾ ನ್ಯಾಯಾಲಯ ರಾಯ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 103ರ ಅಡಿ ಕೊಲೆ, ಸೆಕ್ಷನ್ 64 ರ ಅಡಿಯಲ್ಲಿ ಅತ್ಯಾಚಾರ ಹಾಗೂ ಸೆಕ್ಷನ್ 66ರ ಅಡಿ ಸಾವಿಗೆ ಕಾರಣವಾಗುವ ಇಲ್ಲವೇ ಜೀವಚ್ಛವನ್ನಾಗಿಸುವ ಆರೋಪಗಳನ್ನು ನಿಗದಿಪಡಿಸಿದೆ. ಪ್ರಕರಣದ ವಿಚಾರಣೆ ನವೆಂಬರ್ 11ರಂದು ಆರಂಭವಾಗಲಿದೆ.

Also Read
ಆರ್‌ ಜಿ ಕರ್‌ ಕಾಲೇಜು ಪ್ರಕರಣ: ಪ್ರತಿಭಟನಾ ನಿರತ ವೈದ್ಯರು ನಾಳೆ ಸಂಜೆಯೊಳಗೆ ಕೆಲಸಕ್ಕೆ ಮರಳುವಂತೆ ಸುಪ್ರೀಂ ತಾಕೀತು

ಆಗಸ್ಟ್ 9ರಂದು ಆರ್‌ ಜಿ ಕರ್ ವೈದ್ಯಕೀಯ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಸಂತ್ರಸ್ತೆ ಶವವಾಗಿ ಪತ್ತೆಯಾಗಿದ್ದರು. ಈ ಘಟನೆ ರಾಷ್ಟ್ರವ್ಯಾಪಿ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಗಿತ್ತು. ಪ್ರಕರಣವನ್ನು ಕಲ್ಕತ್ತಾ ಹೈಕೋರ್ಟ್‌ ಸಿಬಿಐಗೆ ವಹಿಸಿತ್ತು.

Also Read
ಆರ್‌ ಜಿ ಕರ್ ಪ್ರಕರಣದಲ್ಲಿ ವಾದಿಸುತ್ತಿರುವ ವಕೀಲೆಯರಿಗೆ ಅತ್ಯಾಚಾರ ಬೆದರಿಕೆ: ಸುಪ್ರೀಂ ಕೋರ್ಟ್‌ನಲ್ಲಿ ಸಿಬಲ್ ಆತಂಕ

ಸ್ವಯಂ ಪ್ರೇರಿತವಾಗಿ ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಸುಪ್ರೀಂ ಕೋರ್ಟ್‌ ವೈದ್ಯರು ಮತ್ತು ವೈದ್ಯಕೀಯ ವೃತ್ತಿಪರರ ಸುರಕ್ಷತೆ ಮತ್ತು ಘನತೆಗೆ ಸಂಬಂಧಿಸಿದ ಸಮಸ್ಯೆ ನಿವಾರಿಸಲು ರಾಷ್ಟ್ರೀಯ ಕಾರ್ಯಪಡೆ (NTF) ಸ್ಥಾಪಿಸಿತ್ತು.

 ಈ ಹಿಂದೆ ಕಾಲೇಜಿನ ಪ್ರಾಂಶುಪಾಲ ಸಂದೀಪ್‌ ಘೋಷ್‌ ಹಾಗೂ ಇತರ ಶಂಕಿತ ಆರೋಪಿಗಳ ವಿರುದ್ಧ ಮಂಪರು ಪರೀಕ್ಷೆ ನಡೆಸಲು ಸಿಬಿಐ ನ್ಯಾಯಾಲಯದ ಅನುಮತಿಯನ್ನು ಪಡೆದಿತ್ತು. ಆದರೆ, ಆರೋಪಪಟ್ಟಿಯಲ್ಲಿ ರಾಯ್‌ ಒಬ್ಬನನ್ನೇ ಆರೋಪಿಯನ್ನಾಗಿ ಗುರುತಿಸಲಾಗಿದೆ.

Kannada Bar & Bench
kannada.barandbench.com