ಪರಿಹಾರ ಪಾವತಿಸದೆ ಖಾಸಗಿ ಆಸ್ತಿಯಲ್ಲಿ ಪೊಲೀಸ್ ಠಾಣೆ ಸ್ಥಾಪನೆ: ತೆರವಿಗೆ ಕಾಶ್ಮೀರ ಹೈಕೋರ್ಟ್ ಆದೇಶ

ರಾಜ್ಯ ಸರ್ಕಾರ ಪರಿಹಾರ ನೀಡಿ ಜಮೀನು ಸ್ವಾಧೀನ ಪಡಿಸಿಕೊಳ್ಳದೆ, ಖಾಸಗಿ ವ್ಯಕ್ತಿಗಳಿಗೆ ಸೇರಿದ ಭೂಮಿಯನ್ನು ವಶಪಡಿಸಿಕೊಳ್ಳಲು ಸಾಧ್ಯವಿಲ್ಲ. ಇದು ಸಂವಿಧಾನದ 300 ಎ ವಿಧಿಯ ಉಲ್ಲಂಘನೆಯಾಗುತ್ತದೆ ಎಂದಿದೆ ನ್ಯಾಯಾಲಯ.
High Court of Jammu & Kashmir, Srinagar
High Court of Jammu & Kashmir, Srinagar

ಪರಿಹಾರ ಪಾವತಿಸದೇ, ಬಾಡಿಗೆಯನ್ನೂ ನೀಡದೆ ಖಾಸಗಿ ಜಮೀನಿನಲ್ಲಿ ಸ್ಥಾಪಿಸಲಾಗಿದ್ದ ಪೊಲೀಸ್‌ ಠಾಣೆಯನ್ನು ತೆರವುಗೊಳಿಸುವಂತೆ ಜಮ್ಮು, ಕಾಶ್ಮೀರ ಹಾಗೂ ಲಡಾಖ್‌ ಹೈಕೋರ್ಟ್‌ ಇತ್ತೀಚೆಗೆ ಆದೇಶಿಸಿದೆ. [ಅಬ್ದುಲ್ ಅಹದ್ ಶೆರ್ಗೋಜ್ರಿ ಮತ್ತು ಜಮ್ಮು ಕಾಶ್ಮೀರ ಸರ್ಕಾರ ಇನ್ನಿತರರ ನಡುವಣ ಪ್ರಕರಣ].

ರಾಜ್ಯ ಸರ್ಕಾರ ಪರಿಹಾರ ನೀಡಿ ಸ್ವಾಧೀನ ಪಡಿಸಿಕೊಳ್ಳದೆ ಖಾಸಗಿ ವ್ಯಕ್ತಿಗಳಿಗೆ ಸೇರಿದ ಭೂಮಿಯನ್ನು ವಶಪಡಿಸಿಕೊಳ್ಳಲು ಸಾಧ್ಯವಿಲ್ಲ. ಇದು ಸಂವಿಧಾನದ 300 ಎ ವಿಧಿಯ ಉಲ್ಲಂಘನೆಯಾಗುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಪಂಕಜ್ ಮಿಥಲ್ ಮತ್ತು ನ್ಯಾಯಮೂರ್ತಿ ಮೋಕ್ಷಾ ಖಜುರಿಯಾ ಕಜ್ಮಿ ಅವರಿದ್ದ ಪೀಠ ತಿಳಿಸಿದೆ.

Also Read
[300 ಎ ವಿಧಿ] ಆಸ್ತಿಯ ಹಕ್ಕು ಮೂಲಭೂತ ಹಕ್ಕಿಗೆ ಸಮ ಎಂದ ಕಾಶ್ಮೀರ ಹೈಕೋರ್ಟ್

ಕಾಶ್ಮೀರದ ಅಚಾಬಲ್‌ನಲ್ಲಿರುವ ಆಸ್ತಿಯೊಂದರ ಕಾನೂನುಬದ್ಧ ತಾವು ಒಡೆಯ. ಆದರೆ 2003ರಿಂದ ಈ ಜಮೀನು ರಾಜ್ಯ ಪೊಲೀಸರ ವಶದಲ್ಲಿದ್ದು ತಮಗೆ ಯಾವುದೇ ಬಾಡಿಗೆ ಅಥವಾ ಪರಿಹಾರ ನೀಡಿಲ್ಲ ಎಂದು ಅಬ್ದುಲ್ ಅಹದ್ ಶೇರ್ಗಿಜ್ರಿ ಎಂಬುವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಈ ಆದೇಶ ನೀಡಲಾಗಿದೆ.

ಪರಿಹಾರ ಅಥವಾ ಬಾಡಿಗೆ ಪಾವತಿಸುವಂತೆ ನ್ಯಾಯಾಲಯ ಈ ಹಿಂದೆಯೇ ಸೂಚಿಸಿದ್ದರೂ ಸರ್ಕಾರ ಸ್ಪಂದಿಸದಿದ್ದ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣೆ ತೆರವುಗೊಳಿಸುವಂತೆ ಹೈಕೋರ್ಟ್‌ ಸೂಚಿಸಿದೆ. ಅಲ್ಲದೆ ಭೂಮಿ ಸ್ವಾಧೀನ ಪಡಿಸಿಕೊಳ್ಳಲು, ಇಲ್ಲವೇ ಸಕ್ಷಮ ಪ್ರಾಧಿಕಾರ ನಿಗದಿಪಡಿಸಿರುವ ಪರಿಹಾರ ಪಡೆಯಲು ಅರ್ಜಿದಾರರು ಪ್ರಕ್ರಿಯೆ ಆರಂಭಿಸಬಹುದು ಎಂದು ಕೂಡ ಅದು ಹೇಳಿದೆ.

Related Stories

No stories found.
Kannada Bar & Bench
kannada.barandbench.com