ಶಬರಿಮಲೆ ಚಿನ್ನಗಳವು: ದೇವಸ್ವಂ ಮಾಜಿ ಆಡಳಿತಾಧಿಕಾರಿ ಶ್ರೀಕುಮಾರ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೇರಳ ಹೈಕೋರ್ಟ್

ಶಬರಿಮಲೆ ದೇಗುಲದ ದ್ವಾರಪಾಲಕ ವಿಗ್ರಹ ಮತ್ತು ಬಾಗಿಲಿನ ಚೌಕಟ್ಟಿಗೆ ಹೊದಿಸಲಾದ ಚಿನ್ನ ಲೇಪಿತ ತಗಡುಗಳಿಂದ ಚಿನ್ನ ಕಾಣೆಯಾದ ಪ್ರಕರಣ ಇದಾಗಿದೆ.
sabarimala temple
sabarimala temple
Published on

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದ ಆರೋಪಿಯಾಗಿರುವ ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಮಾಜಿ ಆಡಳಿತಾಧಿಕಾರಿ ಎಸ್. ಶ್ರೀಕುಮಾರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಕೇರಳ ಹೈಕೋರ್ಟ್ ಗುರುವಾರ ನಿರಾಕರಿಸಿದೆ.

ಶ್ರೀಕುಮಾರ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿ ಎ ಬದರುದ್ದೀನ್ ಆದೇಶ ಹೊರಡಿಸಿದರು. ಆರೋಪಿಗಳ ಪರವಾಗಿ ವಕೀಲರಾದ ರೆಂಜಿತ್ ಮಾರಾರ್ ಮತ್ತು ಕೇಶವ್ ರಾಜ್ ನಾಯರ್ ವಾದ ಮಂಡಿಸಿದರು.

Also Read
ಶಬರಿಮಲೆ ಚಿನ್ನಗಳವು: ಸಿಬಿಐ ತನಿಖೆ ಕೋರಿ ಕೇರಳ ಹೈಕೋರ್ಟ್‌ಗೆ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅರ್ಜಿ

ದೇವಾಲಯದ ದ್ವಾರಪಾಲಕ ವಿಗ್ರಹಗಳ ಚಿನ್ನ ಲೇಪಿತ ತಾಮ್ರದ ತಗಡುಗಳನ್ನು ನ್ಯಾಯಾಲಯ ಅಥವಾ ಶಬರಿಮಲೆಯ ವಿಶೇಷ ಆಯುಕ್ತರಿಗೆ ತಿಳಿಸದೆಯೇ ದುರಸ್ತಿಗಾಗಿ ಕಳುಹಿಸಲಾಗಿತ್ತು. ಆಗ 4 ಕಿಲೋ ಚಿನ್ನ ಕಾಣೆಯಾಗಿದೆ ಎಂಬ ಕಳವಳ ವ್ಯಕ್ತವಾಗಿತ್ತು.

ಮೂರ್ತಿಯ ಹೊದಿಕೆಗಳನ್ನು ತೆಗೆದಿದಿದ್ದ ಟಿಡಿಬಿ, ಉನ್ನಿಕೃಷ್ಣನ್ ಪೊಟ್ಟಿ ಎಂಬ ಭಕ್ತರ ಪ್ರಾಯೋಜಕತ್ವದಡಿಯಲ್ಲಿ ದುರಸ್ತಿ ಕಾರ್ಯವನ್ನು ಚೆನ್ನೈ ಮೂಲದ 'ಸ್ಮಾರ್ಟ್ ಕ್ರಿಯೇಷನ್ಸ್' ಎಂಬ ಸಂಸ್ಥೆಗೆ ವಹಿಸಿತ್ತು. ಉನ್ನಿಕೃಷ್ಣನ್ ಪೊಟ್ಟಿಯವರ ಸಹೋದರಿ ಮಿನಿಯವರ ಮನೆಯಲ್ಲಿ ಕೆಲವು ಚಿನ್ನ ಲೇಪಿತ ತಗಡುಗಳನ್ನು ಬಚ್ಚಿಟ್ಟಿರುವುದು ಪತ್ತೆಯಾಗಿತ್ತು.

Also Read
ಶಬರಿಮಲೆ ಚಿನ್ನ ಕಳ್ಳತನ: ದೇವಸ್ವಂ ಮಾಜಿ ಆಡಳಿತಾಧಿಕಾರಿ ಶ್ರೀಕುಮಾರ್ ಬಂಧಿಸದಂತೆ ಕೇರಳ ಹೈಕೋರ್ಟ್ ಮಧ್ಯಂತರ ರಕ್ಷಣೆ

ಕೇರಳ ಹೈಕೋರ್ಟ್ ನಿರ್ದೇಶನದ ಮೇರೆಗೆ ರಚಿಸಲಾದ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸುತ್ತಿರುವ ಈ ಪ್ರಕರಣದಲ್ಲಿ ಶ್ರೀಕುಮಾರ್ ಆರನೇ ಆರೋಪಿಯಾಗಿದ್ದಾರೆ.

ಪೊಟ್ಟಿ ಮತ್ತು ತಿರುವಾಂಕೂರು ದೇವಸ್ವಂ ಮಂಡಳಿಯ ಅಧ್ಯಕ್ಷ ಮತ್ತು ಸಿಪಿಎಂ ನಾಯಕರು. ಪದ್ಮಕುಮಾರ್ ಅವರನ್ನು ಕೂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.

Kannada Bar & Bench
kannada.barandbench.com