ದ್ವೇಷ ಭಾಷಣ ಪ್ರಕರಣ: ರಾಜಕಾರಣಿ ಆಜಂ ಖಾನ್‌ಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ

ಶಿಕ್ಷೆಯ ಕಾರಣಕ್ಕೆ ಖಾನ್ ಅವರು ಇನ್ನು ಮುಂದೆ ರಾಜ್ಯ ವಿಧಾನಸಭೆ ಅಥವಾ ಸಂಸತ್ತಿನ ಸದಸ್ಯರಾಗಿ ಸೇವೆ ಸಲ್ಲಿಸುವಂತಿಲ್ಲ.
Samajwadi Party Leader Azam Khan
Samajwadi Party Leader Azam Khan

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು 2019ರಲ್ಲಿ ಮಾಡಿದ್ದ ಟೀಕೆಗಳಿಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ನಾಯಕ ಮತ್ತು ವಿಧಾನಸಭೆ ಸದಸ್ಯ ಅಜಂ ಖಾನ್ ಅವರ ವಿರುದ್ಧ ಹೂಡಲಾಗಿದ್ದ ದ್ವೇಷ ಭಾಷಣ ಪ್ರಕರಣದಲ್ಲಿ ಖಾನ್‌ ದೋಷಿ ಎಂದು ಪ್ರಕಟಿಸಿರುವ ರಾಂಪುರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಯೋಗಿ ಆದಿತ್ಯನಾಥ್ ಮತ್ತು ಅಂದಿನ ಜಿಲ್ಲಾಧಿಕಾರಿಯಾಗಿದ್ದ ಆಂಜನೇಯ ಕುಮಾರ್ ಸಿಂಗ್ ಅವರ ವಿರುದ್ಧ ಪ್ರಜಾಪ್ರತಿನಿಧಿ ಕಾಯಿದೆಯ ಸೆಕ್ಷನ್ 125ರೊಂದಿಗೆ ಐಪಿಸಿ ಸೆಕ್ಷನ್ 153 ಎ ಮತ್ತು 505-1ರ ಅಡಿಯಲ್ಲಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಏಪ್ರಿಲ್ 9, 2019ರಂದು ರಾಂಪುರದಲ್ಲಿ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಶಿಕ್ಷೆಯ ಕಾರಣಕ್ಕೆ ಖಾನ್ ಅವರು ಇನ್ನು ಮುಂದೆ ರಾಜ್ಯ ವಿಧಾನಸಭೆ ಅಥವಾ ಸಂಸತ್ತಿನ ಸದಸ್ಯರಾಗಿ ಸೇವೆ ಸಲ್ಲಿಸುವಂತಿಲ್ಲ.

Also Read
ಆಜಂ ಖಾನ್ ಒಂದು ಪ್ರಕರಣದಲ್ಲಿ ಜಾಮೀನು ಪಡೆದರೆ, ಇನ್ನೊಂದು ದೂರು ಸಿದ್ಧವಾಗಿರುತ್ತದೆ: ಸುಪ್ರೀಂ ಕೋರ್ಟ್

ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಬಳಿಕ ಈ ವರ್ಷದ ಆರಂಭದಲ್ಲಿ ಖಾನ್ ಅವರನ್ನು ಸೀತಾಪುರ ಜೈಲಿನಿಂದ ಬಿಡುಗಡೆ ಮಾಡಲಾಗಿತು. ಖಾನ್‌ ಅವರು ಭ್ರಷ್ಟಾಚಾರ ಮತ್ತು ಕಳ್ಳತನ ಸೇರಿದಂತೆ 90 ಕ್ಕೂ ಹೆಚ್ಚು ಆರೋಪಗಳನ್ನು ಎದುರಿಸುತ್ತಿದ್ದಾರೆ. “ಆಜಂ ಖಾನ್ ಒಂದು ಪ್ರಕರಣದಲ್ಲಿ ಜಾಮೀನು ಪಡೆದರೆ, ಇನ್ನೊಂದು ದೂರು ಸಿದ್ಧವಾಗಿರುತ್ತದೆ” ಎಂದು ವಿಚಾರಣೆಯೊಂದರ ವೇಳೆ ಸುಪ್ರೀಂ ಕೋರ್ಟ್ ಟೀಕಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Related Stories

No stories found.
Kannada Bar & Bench
kannada.barandbench.com