ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಶಿವಸೇನೆ ಉದ್ಧವ್ ಬಣದ ನಾಯಕ ಸಂಜಯ್ ರಾವುತ್ ಅವರನ್ನು ಮುಂಬೈ ನ್ಯಾಯಾಲಯ ಗುರುವಾರ ದೋಷಿ ಎಂದು ತೀರ್ಪು ನೀಡಿದೆ.
ಮುಂಬೈನ ಮಜಗಾಂವ್‌ನಲ್ಲಿರುವ 25 ನೇ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ, ರಾವುತ್‌ಗೆ 15 ದಿನಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿತು.
ಮೀರಾ ಭಾಯಂದರ್ ಪುರಸಭೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ರೂ 100 ಕೋಟಿ ಮೊತ್ತದ ಶೌಚಾಲಯ ನಿರ್ಮಾಣ ಹಗರಣಕ್ಕೆ ಸಂಬಂಧಿಸಿದಂತೆ ಮೇಧಾ ಅವರ ವಿರುದ್ಧ ರಾವುತ್ ಹೇಳಿಕೆ ನೀಡಿದ್ದರು.
ಹೇಳಿಕೆ ಆಧಾರರಹಿತ ಎಂದಿದ್ದ ಮೇಧಾ ಅವರು ರಾವುತ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.