ಸಾವರ್ಕರ್ ಪ್ರಕರಣ: ವಿಚಾರಣೆಯ ಸ್ವರೂಪ ಬದಲಿಸಲು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಅರ್ಜಿ

ತಮ್ಮ ಹೇಳಿಕೆಗಳು ಐತಿಹಾಸಿಕ ಸಂಗತಿಗಳನ್ನು ಆಧರಿಸಿದ್ದು ವಿವರವಾದ ಪುರಾವೆಗಳು ಅಗತ್ಯವಾಗಿರುವುದರಿಂದ 'ಸಮನ್ಸ್ ವಿಚಾರಣೆ' ಹೆಚ್ಚು ಸೂಕ್ತವಾಗುತ್ತದೆ ಎಂದು ರಾಹುಲ್‌ ವಾದಿಸಿದರು.
Rahul Gandhi
Rahul GandhiFacebook
Published on

ಹಿಂದೂ ಮಹಾಸಭಾ ಮುಖಂಡ ವಿ ಡಿ ಸಾವರ್ಕರ್ ಅವರನ್ನು ಅವಹೇಳನ ಮಾಡಿದ ಪ್ರಕರಣದ ವಿಚಾರಣೆಯನ್ನು  ಸಂಕ್ಷಿಪ್ತವಾಗಿ ಆಲಿಸದೆ ಅದನ್ನು ವಿವರವಾದ ಸಮನ್ಸ್‌ ವಿಚಾರಣೆಯಾಗಿ ಪರಿವರ್ತಿಸುವಂತೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುಣೆಯ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ರಾಹುಲ್‌ ಅರ್ಜಿಗೆ ಪ್ರತಿಕ್ರಿಯಿಸುವಂತೆ ದೂರುದಾರರಿಗೆ ಸೂಚಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಮೋಲ್‌ ಶಿಂಧೆ ಅವರು ವಿಚಾರಣೆಗೆ ಖುದ್ದು ಹಾಜರಾಗುವುದರಿಂದ ರಾಹುಲ್‌ ಅವರಿಗೆ ಶಾಶ್ವತ ವಿನಾಯಿತಿ ನೀಡಿದರು.

Also Read
ಸಾವರ್ಕರ್ ವಿರುದ್ಧ ಟೀಕೆ: ರಾಹುಲ್ ಗಾಂಧಿಗೆ ಲಖನೌ ನ್ಯಾಯಾಲಯ ನೋಟಿಸ್

ತಮ್ಮ ಹೇಳಿಕೆಗಳು ಐತಿಹಾಸಿಕ ಸಂಗತಿಗಳನ್ನು ಆಧರಿಸಿದ್ದು ವಿವರವಾದ ಪುರಾವೆಗಳು ಅಗತ್ಯವಾಗಿರುವುದರಿಂದ 'ಸಮನ್ಸ್ ವಿಚಾರಣೆ' ಹೆಚ್ಚು ಸೂಕ್ತವಾಗುತ್ತದೆ ಎಂದು ರಾಹುಲ್‌ ವಾದಿಸಿದರು.

ಮಾರ್ಚ್ 2023ರಲ್ಲಿ ಲಂಡನ್‌ನಲ್ಲಿ ಮಾಡಿದ ಭಾಷಣದ ವೇಳೆ  ದಿವಂಗತ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರ ಬಗ್ಗೆ ರಾಹುಲ್ ಗಾಂಧಿ ನೀಡಿದ ಹೇಳಿಕೆಗಳು ಮಾನನಷ್ಟ ಸ್ವರೂಪದ್ದಾಗಿವೆ ಎಂದು ಪ್ರಕರಣದ ಅರ್ಜಿದಾರ ಹಾಗೂ ಸಾವರ್ಕರ್ ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್ ಆರೋಪಿಸಿದ್ದರು. 

Also Read
ಸಾವರ್ಕರ್‌ ವಿರುದ್ಧದ ಮಾನಹಾನಿ ಪ್ರಕರಣ: ರಾಹುಲ್‌ಗೆ ಸಮನ್ಸ್‌ ಜಾರಿಗೊಳಿಸಿದ ಪುಣೆ ನ್ಯಾಯಾಲಯ

ವಿ ಡಿ ಸಾವರ್ಕರ್‌ ಮತ್ತವರ ಗುಂಪು ಮುಸ್ಲಿಮರನ್ನು ಥಳಿಸಿದ್ದಾಗಿಯೂ ಅದರಿಂದ ತಮಗೆ ಸಂತೋಷವಾಗಿದ್ದಾಗಿಯೂ ಸಾವರ್ಕರ್‌ ಬರೆದುಕೊಂಡಿದ್ದಾರೆ ಎಂದು ರಾಹುಲ್‌ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದರು. ಹೇಳಿಕೆಗಳನ್ನು ನಿರಾಕರಿಸಿದ್ದ ಸಾತ್ಯಕಿ ಅವರು ರಾಹುಲ್‌ ಅವರ ಟೀಕೆಗಳು ಮಾನಹಾನಿಕರ ಎಂದಿದ್ದರು.

ರಾಹುಲ್‌ ಗಾಂಧಿ ಅವರು ಮಾಡಿರುವ ಕ್ರಿಮಿನಲ್ ಮಾನನಷ್ಟಕ್ಕಾಗಿ ಐಪಿಸಿ ಸೆಕ್ಷನ್ 500ರ ಅಡಿಯಲ್ಲಿ  ಗರಿಷ್ಠ ಶಿಕ್ಷೆ ಮತ್ತು ಸಿಆರ್‌ಪಿಸಿ ಸೆಕ್ಷನ್ 357ರ ಅಡಿ ಅತ್ಯಧಿಕ ಪರಿಹಾರ ನೀಡುವಂತೆ ಸಾತ್ಯಕಿ ಕೋರಿದ್ದರು. ಫೆಬ್ರವರಿ 25 ರಂದು ನ್ಯಾಯಾಲಯ ಮಾನನಷ್ಟ ಪ್ರಕರಣದ ಮುಂದಿನ ವಿಚಾರಣೆ ನಡೆಸಲಿದೆ.

Kannada Bar & Bench
kannada.barandbench.com