Justice BN Srikrishna and Mahabaleshwar temple
Justice BN Srikrishna and Mahabaleshwar temple

ಗೋಕರ್ಣ ಮಹಾಬಲೇಶ್ವರ ದೇಗುಲ ಉಸ್ತುವಾರಿಗಾಗಿ ನ್ಯಾ. ಬಿ ಎನ್‌ ಶ್ರೀಕೃಷ್ಣ ನೇತೃತ್ವದ ಸಮಿತಿ ರಚಿಸಿದ ಸುಪ್ರೀಂಕೋರ್ಟ್‌

ಮುಖ್ಯ ನ್ಯಾಯಮೂರ್ತಿ ಎಸ್‌ ಎ ಬೊಬ್ಡೆ, ನ್ಯಾಯಮೂರ್ತಿಗಳಾದ ಎ ಎಸ್‌ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್‌ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠ ಸೋಮವಾರ ಈ ಆದೇಶ ಹೊರಡಿಸಿದೆ.
Published on

ಗೋಕರ್ಣದಲ್ಲಿರುವ ಮಹಾಬಲೇಶ್ವರ ದೇವಸ್ಥಾನದ ಚಟುವಟಿಕೆಗಳ ನಿರ್ವಹಣೆಯ ಜವಾಬ್ದಾರಿಗಾಗಿ ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ ಎನ್‌ ಕೃಷ್ಣ ನೇತೃತ್ವದ ಸಮಿತಿಯನ್ನು ಸೋಮವಾರ ಸುಪ್ರೀಂಕೋರ್ಟ್‌ ನೇಮಿಸಿದೆ.

ಮಹಾಬಲೇಶ್ವರ ದೇವಾಲಯದ ನಿರ್ವಹಣೆಯ ಜವಾಬ್ದಾರಿಯನ್ನು ರಾಮಚಂದ್ರಾಪುರ ಮಠಕ್ಕೆ ನೀಡಿದ್ದ ಸರ್ಕಾರದ ಆದೇಶವನ್ನು 2018ರಲ್ಲಿ ಹೈಕೋರ್ಟ್‌ ವಜಾಗೊಳಿಸಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌ ಎ ಬೊಬ್ಡೆ, ನ್ಯಾಯಮೂರ್ತಿಗಳಾದ ಎ ಎಸ್‌ ಬೋಪಣ್ಣ ಹಾಗೂ ವಿ ರಾಮಸುಬ್ರಮಣಿಯನ್‌ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠ ಸೋಮವಾರ ಆದೇಶ ಹೊರಡಿಸಿದೆ.

Also Read
ಹಿಂದೂಗಳಿಗೆ ಮಥುರಾ ಮಸೀದಿ ನೀಡುವಂತೆ ಕೇಂದ್ರಕ್ಕೆ ನಿರ್ದೇಶಿಸಲು ಕೋರಿ ಅಲಹಾಬಾದ್‌ ಹೈಕೋರ್ಟ್‌ಗೆ ಅರ್ಜಿ

“ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ ಎನ್‌ ಶ್ರೀಕೃಷ್ಣ ನೇತೃತ್ವದಲ್ಲಿ ಸಮಿತಿ ಕಾರ್ಯನಿರ್ವಹಿಸಲಿದೆ. ಉಸ್ತುವಾರಿ ಸಮಿತಿಗೆ ವರದಿ ಮಾಡಿಕೊಳ್ಳಲಿರುವ ಸಹಾಯಕ ಆಯುಕ್ತರಿಗೆ ಮೇಲ್ಮನವಿದಾರರು ಜವಾಬ್ದಾರಿ ವರ್ಗಾಯಿಸಬೇಕು” ಎಂದು ಸುಪ್ರೀಂಕೋರ್ಟ್‌ ಆದೇಶಿಸಿದೆ.

ದೇವಾಲಯದ ಆಚರಣೆ ಮತ್ತು ಸಂಪ್ರದಾಯಕ್ಕೆ ಅನುಗುಣವಾಗಿ ಸುಪ್ರೀಂ ಕೋರ್ಟ್‌ ನೇಮಿಸಿರುವ ಸಮಿತಿಯು ಕಾರ್ಯ ನಿರ್ವಹಿಸಲಿದೆ ಎಂದು ಪೀಠವು ಹೇಳಿದೆ.

Kannada Bar & Bench
kannada.barandbench.com