ಪಿಎಂಎಲ್ಎ ಅಡಿ ಸರ್ಕಾರಿ ನೌಕರನ ವಿಚಾರಣೆಗೆ ಸಿಆರ್‌ಪಿಸಿ ಸೆಕ್ಷನ್ 197ರ ಅಡಿ ಅನುಮತಿ ಪಡೆಯಬೇಕು: ಸುಪ್ರೀಂ ಕೋರ್ಟ್‌

ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಐಎಎಸ್ ಅಧಿಕಾರಿ ಬಿಭು ಪ್ರಸಾದ್ ಆಚಾರ್ಯ ವಿರುದ್ಧ ಹೂಡಲಾಗಿದ್ದ ಪ್ರಕರಣದ ರದ್ದತಿ ಆದೇಶವನ್ನು ನ್ಯಾಯಾಲಯ ಎತ್ತಿ ಹಿಡಿದಿದೆ.
PMLA and Supreme court
PMLA and Supreme court
Published on

ಐಎಎಸ್‌ ಮಾಜಿ ಅಧಿಕಾರಿ ಬಿಭು ಪ್ರಸಾದ್ ಆಚಾರ್ಯ ವಿರುದ್ಧ ಹೂಡಲಾಗಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಆರ್‌ಪಿಸಿ ಸೆಕ್ಷನ್‌ 197ರ ಅಡಿ ಅನುಮತಿ ಪಡೆಯದ ಕಾರಣ ಅವರ ವಿರುದ್ಧದ ಪ್ರಕರಣ ರದ್ದುಗೊಳಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ಎತ್ತಿಹಿಡಿದಿದೆ [ಜಾರಿ ನಿರ್ದೇಶನಾಲಯ ಮತ್ತು ಬಿಭು ಪ್ರಸಾದ್‌ ಆಚಾರ್ಯ ನಡುವಣ ಪ್ರಕರಣ]

ಸಾರ್ವಜನಿಕ ಹುದ್ದೆಯಲ್ಲಿರುವವರು ತಮ್ಮ ಕರ್ತವ್ಯ ನಿರ್ವಹಿಸುವಾಗ ಅಪರಾಧ ಎಸಗಿರುವ ಆರೋಪ ಕೇಳಿ ಬಂದರೆ ಆಗ ಅವರನ್ನು ಕಾನೂನು ಕ್ರಮದಿಂದ ಸಿಆರ್‌ಪಿಸಿ ಸೆಕ್ಷನ್ 197 ರಕ್ಷಿಸುತ್ತದೆ. ಸಾರ್ವಜನಿಕ ಹುದ್ದೆಯಲ್ಲಿರುವವರ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸುವ ಮುನ್ನ ಸಂಬಂಧಪಟ್ಟ ಸರ್ಕಾರದಿಂದ ಪೂರ್ವಾನುಮತಿ ಪಡೆಯಬೇಕು ಎಂದು ಅದು ಹೇಳುತ್ತದೆ.

Also Read
ಕ್ರಿಮಿನಲ್ ಪಿತೂರಿ ಎಂದು ಯಾಂತ್ರಿಕವಾಗಿ ಪಿಎಂಎಲ್‌ಎ ಪ್ರಕರಣ ದಾಖಲಿಸಲಾಗದು: ತೀರ್ಪು ಮರುಪರಿಶೀಲನೆಗೆ ಸುಪ್ರೀಂ ನಕಾರ

ಈ ಸೆಕ್ಷನ್‌ ಹಣ ವರ್ಗಾವಣೆ ತಡೆ ಕಾಯಿದೆ- 2002ರ (ಪಿಎಂಎಲ್‌ಎ) ಅಡಿ ದಾಖಲಾಗುವ ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಅನ್ವಯಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಅಗಸ್ಟಿನ್ ಜಾರ್ಜ್ ಮಸೀಹ್ ಅವರಿದ್ದ ವಿಭಾಗೀಯ ಪೀಠ ಇಂದು ಹೇಳಿದೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಚಾರ್ಯ ಅವರು 2012 ಮತ್ತು 2015 ರಲ್ಲಿ ಜಾರಿ ನಿರ್ದೇಶನಾಲಯಕ್ಕೆ (ಇ ಡಿ) ನೀಡಿದ ಹೇಳಿಕೆಗಳ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

ಆಚಾರ್ಯ ಅವರು ಜಗನ್ ಮೋಹನ್ ರೆಡ್ಡಿ ಹಾಗೂ ಇತರ ಆರೋಪಿಗಳೊಂದಿಗೆ ಶಾಮೀಲಾಗಿ, ತಮ್ಮ ಹುದ್ದೆ ದುರುಪಯೋಗಪಡಿಸಿಕೊಂಡರು. ಅರಬಿಂದೋ ಫಾರ್ಮಾ, ಹೆಟೆರೊ ಗ್ರೂಪ್ ಮತ್ತು ಟ್ರೈಡೆಂಟ್ ಲೈಫ್ ಕಂಪನಿಗಳು ಸೇರಿದಂತೆ ಕೆಲವು ಕಂಪನಿಗಳಿಗೆ ಅನುಚಿತವಾದ ಅನುಗ್ರಹ ತೋರಿದ್ದಾರೆ ಎಂದು ಇ ಡಿ ಆರೋಪಿಸಿತ್ತು.

Also Read
ಬಿಎನ್‌ಎಸ್‌ಎಸ್‌ ಜಾರಿಯಾದ ಬಳಿಕವೂ ಸಿಆರ್‌ಪಿಸಿ ಅಡಿ ಎಫ್‌ಐಆರ್‌ ದಾಖಲಿಸಲು ಅವಕಾಶವಿಲ್ಲ: ಹೈಕೋರ್ಟ್‌

ಆದರೆ ಪಿಎಂಎಲ್‌ಎ ಅಡಿಯಲ್ಲಿ ಆಚಾರ್ಯರನ್ನು ವಿಚಾರಣೆಗೆ ಒಳಪಡಿಸಲು ಅಂದಿನ ರಾಜ್ಯ ಸರ್ಕಾರ ಸಿಆರ್‌ಪಿಸಿ ಸೆಕ್ಷನ್‌ 197ರ ಅಡಿ ಅನುಮತಿ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಆಚಾರ್ಯ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ತೆಲಂಗಾಣ ಹೈಕೋರ್ಟ್‌ ರದ್ದುಪಡಿಸಿತ್ತು.

ಇ ಡಿ ಈ ತೀರ್ಪನ್ನು ಪ್ರಶ್ನಿಸಿತ್ತು. ಸುಪ್ರೀಂ ಕೋರ್ಟ್‌ ಇಂದು ಕೇಂದ್ರ ತನಿಖಾ ಸಂಸ್ಥೆಯಾದ ಜಾರಿ ನಿರ್ದೇಶನಾಲಯದ ಅರ್ಜಿಯನ್ನು ವಜಾಗೊಳಸಿದೆ.

Kannada Bar & Bench
kannada.barandbench.com