ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಹುದ್ದೆಗೆ ಹಿರಿಯ ವಕೀಲ ಅಮನ್‌ ಲೇಖಿ ರಾಜೀನಾಮೆ [ಚುಟುಕು]

Senior Advocate Aman Lekhi

Senior Advocate Aman Lekhi

Published on

ಭಾರತದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಹುದ್ದೆಗೆ ಹಿರಿಯ ವಕೀಲ ಅಮನ್‌ ಲೇಖಿ ಅವರು ರಾಜೀನಾಮೆ ನೀಡಿದ್ದಾರೆ. ಕೇಂದ್ರ ಕಾನೂನು ಸಚಿವ ಕಿರೆನ್‌ ರಿಜಿಜು ಅವರಿಗೆ ಬರೆದಿರುವ ಪತ್ರದಲ್ಲಿ ತಾವು ಎಎಸ್‌ಜಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ಸಲ್ಲಿಸಿರುವುದಾಗಿ ಹೇಳಿದ್ದಾರೆ. ಇದರ ಹೊರತಾಗಿ ರಾಜೀನಾಮೆಗೆ ಯಾವುದೇ ನಿರ್ದಿಷ್ಟ ಕಾರಣಗಳನ್ನು ಅವರು ತಿಳಿಸಿಲ್ಲ. ಮಾರ್ಚ್‌ 2018ರಲ್ಲಿ ಲೇಖಿ ಎಎಸ್‌ಜಿ ಹುದ್ದೆಗೆ ನೇಮಕಗೊಂಡಿದ್ದರು.

ಹೆಚ್ಚಿನ ವಿವರಗಳಿಗೆ 'ಬಾರ್‌ ಅಂಡ್‌ ಬೆಂಚ್' ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Kannada Bar & Bench
kannada.barandbench.com