ರಾಜ್ಯ ಸರ್ಕಾರಿ ಅಭಿಯೋಜಕರಾಗಿ ಹಿರಿಯ ವಕೀಲ ಕಿರಣ್‌ ಜವಳಿ ನೇಮಕ

Senior Advocate Kiran S Javali
Senior Advocate Kiran S Javali

ಹಿರಿಯ ವಕೀಲ ಕಿರಣ್‌ ಎಸ್‌ ಜವಳಿ ಅವರನ್ನು ಎರಡು ವರ್ಷಗಳ ಅವಧಿಗೆ ಅಥವಾ ಸರ್ಕಾರ ನಿರ್ಧಾರ ಮಾಡುವವರೆಗೆ ಅಡ್ವೊಕೇಟ್‌ ಜನರಲ್‌ ಅವರ ಕಚೇರಿಯಲ್ಲಿ ಸರ್ಕಾರಿ ಅಭಿಯೋಜಕರ ಹುದ್ದೆಗೆ ನೇಮಕ ಮಾಡಿ ಕಾನೂನು ಇಲಾಖೆಯು ಮಂಗಳವಾರ ಆದೇಶ ಮಾಡಿದೆ.

ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 23ರ ಅನ್ವಯ ಜವಳಿ ಅವರನ್ನು ನೇಮಕ ಮಾಡಲಾಗಿದೆ. ವಿಜಯ ಕುಮಾರ್‌ ಎಂ ಶೀಲವಂತ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಕಾನೂನು ಇಲಾಖೆಯ ಆಡಳಿತ ವಿಭಾಗದ ಅಧೀನ ಕಾರ್ಯದರ್ಶಿ ಆದಿನಾರಾಯಣ ಅವರು ನೇಮಕ ಮಾಡಿ ಆದೇಶ ಮಾಡಿದ್ದಾರೆ. ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ ನಡೆಸುವ ಪೀಠದ ಮುಂದೆ ಜವಳಿ ಅವರು ರಾಜ್ಯ ಸರ್ಕಾರವನ್ನು ಪ್ರತಿನಿಧಿಸಲಿದ್ದಾರೆ.

Related Stories

No stories found.
Kannada Bar & Bench
kannada.barandbench.com