ಕೆಎಸ್‌ಎಲ್‌ಎಸ್‌ಎ ಕಾರ್ಯಕಾರಿ ಅಧ್ಯಕ್ಷರಾಗಿ ಹಿರಿಯ ನ್ಯಾಯಮೂರ್ತಿ ಕೆ ಸೋಮಶೇಖರ್‌ ನೇಮಕ

ಫೆಬ್ರವರಿ 25ರಿಂದ ಪೂರ್ವಾನ್ವಯವಾಗುವಂತೆ ಕೆಎಸ್‌ಎಲ್‌ಎಸ್‌ಎ ಕಾರ್ಯಕಾರಿ ಅಧ್ಯಕ್ಷರಾಗಿ ನಾಮನಿರ್ದೇಶನ ಮಾಡಿರುವ ರಾಜ್ಯಪಾಲರು.
Justice K Somashekar and KSLSA
Justice K Somashekar and KSLSA

ಕರ್ನಾಟಕ ಹೈಕೋರ್ಟ್‌ ಹಿರಿಯ ನ್ಯಾಯಮೂರ್ತಿ ಕೆ ಸೋಮಶೇಖರ್‌ ಅವರನ್ನು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್‌ಎಲ್‌ಎಸ್‌ಎ) ಕಾರ್ಯಕಾರಿ ಅಧ್ಯಕ್ಷರಾಗಿ ಫೆಬ್ರವರಿ 25ರಿಂದ ಪೂರ್ವಾನ್ವಯವಾಗುವಂತೆ ನೇಮಕ ಮಾಡಿ ರಾಜ್ಯಪಾಲರು ಆದೇಶಿಸಿದ್ದಾರೆ.

ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ ಕಾಯಿದೆ 1987ರ ಸೆಕ್ಷನ್‌ 6ರ, ಉಪಸೆಕ್ಷನ್‌ 2ರ ಕ್ಲಾಸ್‌ ಬಿ ಜೊತೆಗೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿಯಮಗಳು 1996ರ ಅಡಿ ದೊರೆತಿರುವ ಅಧಿಕಾರ ಬಳಸಿ ಹಿರಿಯ ನ್ಯಾಯಮೂರ್ತಿ ಕೆ ಸೋಮಶೇಖರ್‌ ಅವರನ್ನು ಫೆಬ್ರವರಿ 25ರಿಂದ ಅನ್ವಯಿಸುವಂತೆ ಕೆಎಸ್‌ಎಲ್‌ಎಸ್‌ಎ ಕಾರ್ಯಕಾರಿ ಅಧ್ಯಕ್ಷರಾಗಿ ನಾಮನಿರ್ದೇಶನ ಮಾಡಿರುವುದಾಗಿ ರಾಜ್ಯಪಾಲರು ತಿಳಿಸಿದ್ದಾರೆ.

Related Stories

No stories found.
Kannada Bar & Bench
kannada.barandbench.com