ಯುವಕನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣರನ್ನು ಜುಲೈ 18ರವರೆಗೆ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಸೂರಜ್ ಅವರ ಸಿಐಡಿ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ವಿಶೇಷ ಮ್ಯಾಜಿಸ್ಟ್ರೇಟ್ ಕೆ ಎನ್ ಶಿವಕುಮಾರ್ ಅವರ ಮುಂದೆ ಹಾಜರುಪಡಿಸಿದರು.
ಮಾಹಿತಿ ಪಡೆದ ಮ್ಯಾಜಿಸ್ಟ್ರೇಟ್ ಅವರು ಸೂರಜ್‌ರನ್ನು ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದರು.
ಈ ನಡುವೆ, ಸೂರಜ್ ಪರ ವಕೀಲ ನಿಖಿಲ್ ಕಾಮತ್ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದರು. ಆಗ ಸಿಐಡಿ ವಿಶೇಷ ಸರ್ಕಾರಿ ಅಭಿಯೋಜಕರಾದ ಅಶೋಕ್ ನಾಯಕ್ ಅವರು ಗುರುವಾರ (ಜುಲೈ 4) ಆಕ್ಷೇಪಣೆ ಸಲ್ಲಿಸುವುದಾಗಿ ತಿಳಿಸಿದರು.
ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.