ಯುವಕನ ಮೇಲೆ ಲೈಂಗಿಕ ದೌರ್ಜನ್ಯ: ಸೂರಜ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ವಿಶೇಷ ನ್ಯಾಯಾಲಯ

ಎಂ ಎಲ್‌ ಶಿವಕುಮಾರ್‌ ದಾಖಲಿಸಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸೂರಜ್‌ ಸಲ್ಲಿಸಿರುವ ಅರ್ಜಿಯ ಆದೇಶವನ್ನು ಜುಲೈ 22ರಂದು ಪ್ರಕಟಿಸುವುದಾಗಿ ನ್ಯಾಯಾಲಯ ಮುಂದೂಡಿದೆ.
Bengaluru City Civil court, Suraj and Prajwal Revanna
Bengaluru City Civil court, Suraj and Prajwal Revanna
Published on

ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್‌ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಸೋಮವಾರಕ್ಕೆ ಮುಂದೂಡಿದೆ.

ಜೆಡಿಎಸ್‌ ಪಕ್ಷದ ಕಾರ್ಯಕರ್ತ ಚೇತನ್‌ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ಕೋರಿ ಸೂರಜ್‌ ರೇವಣ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ನಡೆಸಿದರು.

ಅರ್ಜಿದಾರರ ಪರವಾಗಿ ವಕೀಲ ಜಿ ಅರುಣ್‌ ಅವರು ವಾದ ಮಂಡಿಸಿದರು. ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ ಎನ್‌ ಜಗದೀಶ್‌ ಅವರು ಮುಂದಿನ ವಿಚಾರಣೆಯ ಸಂದರ್ಭದಲ್ಲಿ ವಾದ ಮಂಡಿಸುವುದಾಗಿ ತಿಳಿಸಿದರು. ಹೀಗಾಗಿ, ನ್ಯಾಯಾಲಯವು ಅರ್ಜಿಯ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿತು.

ಇದೇ ವೇಳೆ ಎಂ ಎಲ್‌ ಶಿವಕುಮಾರ್‌ ದಾಖಲಿಸಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸೂರಜ್‌ ಸಲ್ಲಿಸಿರುವ ಅರ್ಜಿಯ ಆದೇಶವನ್ನು ಜುಲೈ 22ರಂದು ಪ್ರಕಟಿಸುವುದಾಗಿ ನ್ಯಾಯಾಲಯ ಮುಂದೂಡಿದೆ.

Also Read
ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್‌ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ

ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಮಗುವಿನ ಶಾಲಾ ಶುಲ್ಕ ಪಾವತಿಸಲು ನೆರವಾಗುವ ಸೋಗಿನ ಮೇಲೆ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಸೋಮವಾರಕ್ಕೆ (ಜುಲೈ 22) ಮುಂದೂಡಿದೆ. ಉಭಯ ಪಕ್ಷಕಾರರ ಕೋರಿಕೆಯ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ಮುಂದೂಡಲಾಗಿದೆ.

Kannada Bar & Bench
kannada.barandbench.com