ಲೈಂಗಿಕ ದೌರ್ಜನ್ಯ ಪ್ರಕರಣ: ಶಾಸಕ ಎಚ್‌ ಡಿ ರೇವಣ್ಣಗೆ ಜಾಮೀನು ಮಂಜೂರು ಮಾಡಿದ ವಿಶೇಷ ನ್ಯಾಯಾಲಯ

ಐದು ಲಕ್ಷ ಮೌಲ್ಯದ ಬಾಂಡ್‌, ಇಬ್ಬರ ಭದ್ರತೆ ಒದಗಿಸುವುದು, ತನಿಖಾಧಿಕಾರಿಗೆ ಸಹಕಾರ ಸೇರಿದಂತೆ ಕೆಲ ಷರತ್ತುಗಳನ್ನು ವಿಧಿಸಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ವಿಸ್ತೃತ ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.
H D Revanna
H D Revanna

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಸೋಮವಾರ ಜಾಮೀನು ಮಂಜೂರು ಮಾಡಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಮೊದಲನೇ ಆರೋಪಿಯಾಗಿರುವ ಎಚ್‌ ಡಿ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ನ್ಯಾಯಾಧೀಶರಾದ ಜೆ ಪ್ರೀತ್‌ ಪುರಸ್ಕರಿಸಿದ್ದಾರೆ.

ಐದು ಲಕ್ಷ ಮೌಲ್ಯದ ಬಾಂಡ್‌, ಇಬ್ಬರ ಭದ್ರತೆ ಒದಗಿಸುವುದು, ತನಿಖಾಧಿಕಾರಿಗೆ ಸಹಕಾರ ಸೇರಿದಂತೆ ಕೆಲ ಷರತ್ತುಗಳನ್ನು ವಿಧಿಸಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ವಿಸ್ತೃತ ಆದೇಶದ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಅರ್ಜಿದಾರರ ಪರವಾಗಿ ಹಿರಿಯ ವಕೀಲ ಸಿ ವಿ ನಾಗೇಶ್‌, ಪ್ರಾಸಿಕ್ಯೂಷನ್‌ ಪರವಾಗಿ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರಾದ ಅಶೋಕ್‌ ನಾಯ್ಕ್‌ ಮತ್ತು ಜಯ್ನಾ ಕೊಠಾರಿ ವಾದಿಸಿದರು.

Also Read
ಲೈಂಗಿಕ ದೌರ್ಜನ್ಯ ಪ್ರಕರಣ: ಶಾಸಕ ಎಚ್‌ ಡಿ ರೇವಣ್ಣ ಜಾಮೀನು ಅರ್ಜಿ ಕುರಿತ ಆದೇಶ ಕಾಯ್ದಿರಿಸಿದ ವಿಶೇಷ ನ್ಯಾಯಾಲಯ

ಸಂತ್ರಸ್ತೆಯ ದೂರು ಆಧರಿಸಿ ಐಪಿಸಿ ಸೆಕ್ಷನ್‌ ಪ್ರಕರಣ 354ಎ, 354ಡಿ, 506, 509ರ ಅಡಿ ಪ್ರಕರಣ ದಾಖಲಿಸಲಾಗಿದ್ದು, ರೇವಣ್ಣ ಅವರನ್ನು ಮೊದಲನೇ ಆರೋಪಿ ಹಾಗೂ ಪ್ರಜ್ವಲ್‌ ಅವರನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ.

Also Read
[ಮಹಿಳೆ ಅಪಹರಣ ಪ್ರಕರಣ] ರೇವಣ್ಣಗೆ ಜಾಮೀನು: ಪಾಸ್‌ಪೋರ್ಟ್‌ ನ್ಯಾಯಾಲಯಕ್ಕೆ ಸಲ್ಲಿಸಬೇಕು; ರಾಜ್ಯದ ಗಡಿ ತೊರೆಯುವಂತಿಲ್ಲ

ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ರೇವಣ್ಣಗೆ ಈಚೆಗೆ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿತ್ತು.

Kannada Bar & Bench
kannada.barandbench.com