ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಮುಖಂಡ ಎಚ್‌ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ವಿಶೇಷ ನ್ಯಾಯಾಲಯ

ಮನೆಗೆಲಸದ ಸಂತ್ರಸ್ತೆ ದಾಖಲಿಸಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ನ್ಯಾಯಾಧೀಶೆ ಜೆ ಪ್ರೀತ್‌ ವಿಚಾರಣೆ ನಡೆಸಿದರು.
H D Revanna
H D Revanna

ಮನೆಗೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಶಾಸಕ ಎಚ್‌ ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ.

ಮನೆಗೆಲಸದ ಸಂತ್ರಸ್ತೆ ದಾಖಲಿಸಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ನ್ಯಾಯಾಧೀಶೆ ಜೆ ಪ್ರೀತ್‌ ವಿಚಾರಣೆ ನಡೆಸಿದರು. ಅರ್ಜಿ ವಿಚಾರಣೆಗೆ ನಿಗದಿಯಾಗಿದ್ದ ಹಿನ್ನೆಲೆಯಲ್ಲಿ ಆರೋಪಿ ರೇವಣ್ಣ ಮುಂಚಿತವಾಗಿಯೇ ಗುರುವಾರ ಬೆಳಿಗ್ಗೆ ನ್ಯಾಯಾಲಯದಲ್ಲಿ ಹಾಜರಾಗಿದ್ದರು. 

ಪ್ರಾಸಿಕ್ಯೂಷನ್‌ ಪರ ವಕೀಲರು ಹಾಜರಾಗಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕೋರಿದರು. ಜಾಮೀನು ನೀಡದಂತೆ ನ್ಯಾಯಾಧೀಶರಿಗೆ ಮನವಿ ಮಾಡಿದರು.

Also Read
ಸಂಸದ ಪ್ರಜ್ವಲ್‌ ವಿರುದ್ಧದ ಲೈಂಗಿಕ ಪ್ರಕರಣ: ಸ್ವತಂತ್ರ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಕೆಲಕಾಲ ವಾದ ಆಲಿಸಿದ ನ್ಯಾಯಾಧೀಶರು, ₹ 5 ಲಕ್ಷ ಮೊತ್ತದ ಬಾಂಡ್‌ ನೀಡಬೇಕು ಮತ್ತು ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ಒದಗಿಸಬೇಕು ಎಂಬ ಷರತ್ತಿನೊಂದಿಗೆ ಮಧ್ಯಂತರ ಜಾಮೀನು ನೀಡಿ ಅರ್ಜಿ ವಿಚಾರಣೆ ಮುಂದೂಡಿದರು.

ಹೊಳೆನರಸೀಪುರ ಟೌನ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದ ಈ ಪ್ರಕರಣದಲ್ಲಿ ಎಚ್‌ ಡಿ ರೇವಣ್ಣ ಮೊದಲನೇ ಆರೋಪಿಯಾಗಿದ್ದು, ಸಂಸದರೂ ಆದ ಪುತ್ರ ಪ್ರಜ್ವಲ್‌ ರೇವಣ್ಣ ಎರಡನೇ ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಐಪಿಸಿ ಸೆಕ್ಷನ್‌ 376 ಸೇರ್ಪಡೆ ಮಾಡಬೇಕು ಎಂದು ಎಸ್‌ಐಟಿ ಕೋರಿದೆ.

Related Stories

No stories found.
Kannada Bar & Bench
kannada.barandbench.com