sexual harassment
sexual harassment

ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ಮುಖಂಡ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಆರೋಪಿ ದೇವರಾಜೇಗೌಡ ಅವರನ್ನು ಶನಿವಾರ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ಎಸ್‌ ಸಿದ್ದರಾಮ ಅವರ ನಿವಾಸದಲ್ಲಿ ಹಾಜರುಪಡಿಸಲಾಯಿತು.
Published on

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಹಾಸನ ಬಿಜೆಪಿ ಮುಖಂಡ ಹಾಗೂ ವಕೀಲ ಡಿ ದೇವರಾಜೇಗೌಡ ಅವರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ನ್ಯಾಯಾಲಯವು ಶನಿವಾರ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಆರೋಪಿ ದೇವರಾಜೇಗೌಡ ಅವರನ್ನು ಶನಿವಾರ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ಎಸ್‌ ಸಿದ್ದರಾಮ ಅವರ ನಿವಾಸದಲ್ಲಿ ಹಾಜರುಪಡಿಸಲಾಯಿತು.

ಪ್ರಕರಣದ ಮಾಹಿತಿ ಪಡೆದ ನ್ಯಾಯಾಧೀಶರು ಆರೋಪಿ ದೇವರಾಜೇಗೌಡ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದರು. ಇದಕ್ಕೂ ಮುನ್ನ, ಆರೋಪಿಯನ್ನು ಪೊಲೀಸರು ಚಿತ್ರದುರ್ಗದ ಹಿರಿಯೂರು ಸಮೀಪ ಶುಕ್ರವಾರ ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಿದ್ದರು.

ಪ್ರಕರಣದ ಹಿನ್ನೆಲೆ: ಹತ್ತು ತಿಂಗಳ ಹಿಂದೆ ಪರಿಚಯವಾಗಿದ್ದ ದೇವರಾಜೇಗೌಡ ಆಗಾಗ ಫೋನ್ ಮಾಡಿ ಹೊಳೆನರಸೀಪುರದಲ್ಲಿ ಮನೆ ಕಟ್ಟಿಸಿಕೊಡುತ್ತೇನ ಎಂದು ನಂಬಿಸಿ ಹಾಸನಕ್ಕೆ ಕರೆದೊಯ್ದು ದೈಹಿಕವಾಗಿ ದುರುಪಯೋಗ ಮಾಡಿಕೊಂಡಿದ್ದಾರೆ. ನಂತರ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಹೊಳೆನರಸೀಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಜ್ವಲ್‌ ರೇವಣ್ಣ ಪ್ರಕರಣದ ಪೆನ್‌ಡ್ರೈವ್‌ ಹಂಚಿಕೆಯ ಹಿಂದೆ ದೇವರಾಜೇಗೌಡ ಪಾತ್ರ ಇದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲೂ ತನಿಖೆ ನಡೆಯುವ ಸಾಧ್ಯತೆ ದಟ್ಟವಾಗಿದೆ.

Kannada Bar & Bench
kannada.barandbench.com