ದೆಹಲಿ ಗಲಭೆ ಪ್ರಕರಣ: ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಿಸಿದ ಸ್ಥಳೀಯ ನ್ಯಾಯಾಲಯ [ಚುಟುಕು]

ದೆಹಲಿ ಗಲಭೆ ಪ್ರಕರಣ: ಶಾರ್ಜೀಲ್ ಇಮಾಮ್‌ಗೆ ಜಾಮೀನು ನಿರಾಕರಿಸಿದ ಸ್ಥಳೀಯ ನ್ಯಾಯಾಲಯ [ಚುಟುಕು]
Sharjeel Imam

ದೆಹಲಿ ಗಲಭೆಗೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯಿದೆಯಡಿ ದಾಖಲಾದ ಪ್ರಕರಣದಲ್ಲಿ ಜವಾಹರಲಾಲ್ ನೆಹರು ವಿವಿಯ ಮಾಜಿ ವಿದ್ಯಾರ್ಥಿ ಶಾರ್ಜೀಲ್ ಇಮಾಮ್‌ಗೆ ದೆಹಲಿ ಸ್ಥಳೀಯ ನ್ಯಾಯಾಲಯ ಸೋಮವಾರ ಜಾಮೀನು ನಿರಾಕರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಆದೇಶ ಮಾಡಿದರು. ದೆಹಲಿ ಗಲಭೆಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಆರೋಪಿ, ವಿದ್ಯಾರ್ಥಿ ಹೋರಾಟಗಾರ ಉಮರ್‌ ಖಾಲಿದ್‌ಗೆ ಈ ಹಿಂದೆ ಜಾಮೀನು ನಿರಾಕರಿಸಲಾಗಿತ್ತು.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Related Stories

No stories found.