ರಾಜ್ಯದಲ್ಲಿ 16,500 ವೈದ್ಯಕೀಯ ಸಿಬ್ಬಂದಿ, 454 ಪಿಎಚ್‌ಸಿ ಕೊರತೆ: ರಾಜ್ಯ, ಕೇಂದ್ರಕ್ಕೆ ಹೈಕೋರ್ಟ್‌ನಿಂದ ನೋಟಿಸ್‌

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ರಾಜ್ಯ ಆರೋಗ್ಯ ಇಲಾಖೆಗೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸುವಂತೆ ಹೈಕೋರ್ಟ್‌ ನಿರ್ದೇಶನ ನೀಡಿದೆ.
Karnataka High Court and doctor
Karnataka High Court and doctor

ರಾಜ್ಯದಲ್ಲಿ 16,500 ವೈದ್ಯಕೀಯ ಸಿಬ್ಬಂದಿ ಮತ್ತು 454 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆ ಹಿನ್ನೆಲೆಯಲ್ಲಿ ದಾಖಲಿಸಿಕೊಂಡ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಂಗಳವಾರ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ಜಾರಿಗೊಳಿಸಿದೆ.

ರಾಜ್ಯದಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ಕುರಿತಂತೆ ಮಾಧ್ಯಮ ವರದಿ ಆಧರಿಸಿ ದಾಖಲಿಸಿಕೊಂಡಿದ್ದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ರಾಜ್ಯ ಆರೋಗ್ಯ ಇಲಾಖೆಗೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ: ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟವು (ಎಫ್‌ಐಸಿಸಿಐ) ಕಳೆದ ಸೆಪ್ಟೆಂಬರ್‌ನಲ್ಲಿ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ರಾಜ್ಯವು ಒಂದು ಟ್ರಿಲಿಯನ್‌ ಡಾಲರ್‌ ಆರ್ಥಿಕತೆ ಗುರಿ ಸಾಧಿಸಬೇಕಾದರೆ ಆರೋಗ್ಯ, ಕೃಷಿ, ಗಣಿ, ಪ್ರವಾಸೋದ್ಯಮ, ಶಿಕ್ಷಣ, ನಗರ ಮತ್ತು ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆ ಕಾಣಬೇಕಿದೆ ಎಂದಿದ್ದು, ಇದಕ್ಕೆ ಸಂಬಂಧಿಸಿದಂತೆ 260 ಸಲಹೆಗಳನ್ನು ನೀಡಿದೆ.

Also Read
ರಾಜ್ಯದಲ್ಲಿ 16,500 ವೈದ್ಯಕೀಯ ಸಿಬ್ಬಂದಿ, 454 ಆರೋಗ್ಯ ಕೇಂದ್ರಗಳ ಕೊರತೆ: ಹೈಕೋರ್ಟ್‌ನಿಂದ ಸ್ವಯಂಪ್ರೇರಿತ ಪಿಐಎಲ್‌

ವರದಿಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ 454 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು 16,500 ವೈದ್ಯಕೀಯ ಸಿಬ್ಬಂದಿ ಕೊರತೆ ಇದೆ ಎನ್ನಲಾಗಿದೆ. ಇದರಲ್ಲಿ 723 ಎಂಬಿಬಿಎಸ್‌ ವೈದ್ಯರು, 7,492 ನರ್ಸ್‌ಗಳು, 1,517 ಲ್ಯಾಬ್‌ ಟೆಕ್ನೀಶಿಯನ್ಸ್‌, 1,512 ಫಾರ್ಮಸಿಸ್ಟ್‌, 1,752 ಸಹಾಯಕರು ಮತ್ತು 3,253 ʼಡಿʼ ಗ್ರೂಪ್‌ ಸಿಬ್ಬಂದಿ ಹುದ್ದೆಗಳು ಸೇರಿವೆ ಎಂದು ಎಫ್‌ಐಸಿಸಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನು ಆಧರಿಸಿ ಮಾಧ್ಯಮವೊಂದು ವರದಿ ಪ್ರಕಟಿಸಿತ್ತು. ಈ ವರದಿಯ ಸಂಜ್ಞೇ ಪರಿಗಣಿಸಿರುವ ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ಪಿಐಎಲ್‌ ದಾಖಲಿಸಿಕೊಂಡಿತ್ತು. 

Related Stories

No stories found.
Kannada Bar & Bench
kannada.barandbench.com