ಶ್ರದ್ಧಾ ಹತ್ಯೆ ಪ್ರಕರಣ: ಅಫ್ತಾಬ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ದೆಹಲಿ ನ್ಯಾಯಾಲಯ

ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾಯಾಧೀಶ ಅವಿರಳ್ ಶುಕ್ಲಾ ಈ ಆದೇಶ ನೀಡಿದರು.
ಶ್ರದ್ಧಾ ಹತ್ಯೆ ಪ್ರಕರಣ: ಅಫ್ತಾಬ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ದೆಹಲಿ ನ್ಯಾಯಾಲಯ
Published on

ತನ್ನ ಲಿವ್‌-ಇನ್‌ ಸಂಗಾತಿ ಶ್ರದ್ಧಾ ವಾಲ್ಕರ್‌ಳನ್ನು ಬರ್ಬರವಾಗಿ ಕೊಂದ ಆರೋಪಿ ಅಫ್ತಾಬ್‌ ಪೂನಾವಾಲಾನನ್ನು ದೆಹಲಿಯ ಸಾಕೇತ್‌ ಜಿಲ್ಲಾ ನ್ಯಾಯಾಲಯ ಶನಿವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾಯಾಧೀಶ ಅವಿರಳ್‌ ಶುಕ್ಲಾ ಈ ಆದೇಶ ನೀಡಿದರು. ಅಫ್ತಾಬ್‌ನನ್ನು ಹದಿಮೂರು ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಫ್ತಾಬ್‌ಗೆ ನೀಡಿದ್ದ ಪೊಲೀಸ್‌ ಕಸ್ಟಡಿ ಅವಧಿಯನ್ನು ನಾಲ್ಕು ದಿನಗಳ ಕಾಲ ವಿಸ್ತರಿಸಿ ನವೆಂಬರ್ 22 ರಂದು ನ್ಯಾಯಾಧೀಶರು ಆದೇಶ ಹೊರಡಿಸಿದ್ದರು. ಕಳೆದ ವಾರ ಆತನ ಮಂಪರು ಪರೀಕ್ಷೆಗೆ ನ್ಯಾಯಾಲಯ ಅನುಮತಿ ನೀಡಿತ್ತು.

Also Read
ಆವೇಗ, ಆಕ್ರೋಶದಲ್ಲಿ ಶ್ರದ್ಧಾ ಕೊಲೆ ಮಾಡಿದೆ ಎಂದ ಅಫ್ತಾಬ್‌: ಪೊಲೀಸ್‌ ಕಸ್ಟಡಿ ಅವಧಿ ವಿಸ್ತರಿಸಿದ ದೆಹಲಿ ನ್ಯಾಯಾಲಯ

ಬಂಬಲ್‌ ಡೇಟಿಂಗ್‌ ಅಪ್ಲಿಕೇಷನ್‌ ಮೂಲಕ  ಭೇಟಿಯಾದ ಅಫ್ತಾಬ್‌- ಶ್ರದ್ಧಾ ಜೋಡಿ ಸಹ ಜೀವನ ನಡೆಸುತ್ತಿತ್ತು. ಮೂಲತಃ ಮುಂಬೈ ನಿವಾಸಿಗಳಾಗಿದ್ದ ಈ ಜೋಡಿ ಇದೇ ವರ್ಷದ ಮೊದಲ ಭಾಗದಲ್ಲಿ ದೆಹಲಿಗೆ ಸ್ಥಳಾಂತರಗೊಂಡಿದ್ದರು.

ಪೊಲೀಸರ ಪ್ರಕಾರ, ಈ ವರ್ಷ ಮೇ 18 ರಂದು ಮೆಹ್ರೌಲಿಯ ಬಾಡಿಗೆ ಫ್ಲಾಟ್‌ನಲ್ಲಿ ಇಬ್ಬರ ನಡುವೆ ಜಗಳ ನಡೆದಿತ್ತು. ಆರೋಪಿ ಸಂತ್ರಸ್ತೆಯ ಕತ್ತು ಹಿಸುಕಿ ಕೊಲೆ ಮಾಡಿದ್ದ ನಂತರ. ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಫ್ರಿಜ್‌ನಲ್ಲಿ ಇರಿಸಿದ್ದ. ಕೊಲೆ ನಡೆದ ಹದಿನೆಂಟು ದಿನಗಳಲ್ಲಿ ವಿವಿಧ ಪ್ರದೇಶಗಳಲ್ಲಿ ಆ ತುಂಡುಗಳನ್ನು ಎಸೆದು ಬಂದಿದ್ದ.

Kannada Bar & Bench
kannada.barandbench.com