ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್‌ನಿಂದ 6 ಮಂದಿ ನಾಪತ್ತೆ: ಮದ್ರಾಸ್ ಹೈಕೋರ್ಟ್‌ಗೆ ತಮಿಳುನಾಡು ಪೊಲೀಸರ ಮಾಹಿತಿ

ಕಾಣೆಯಾದ ಪ್ರಕರಣಗಳ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ ಎಂದು ಪೊಲೀಸರಿಂದ ನ್ಯಾಯಾಲಯಕ್ಕೆ ವಿವರಣೆ.
ಮದ್ರಾಸ್ ಹೈಕೋರ್ಟ್ ಮತ್ತು ಜಗ್ಗಿ ವಾಸುದೇವ್
ಮದ್ರಾಸ್ ಹೈಕೋರ್ಟ್ ಮತ್ತು ಜಗ್ಗಿ ವಾಸುದೇವ್ಜಗ್ಗಿ ವಾಸುದೇವ್ - ಫೇಸ್ ಬುಕ್

ಕೊಯಮತ್ತೂರಿನ ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ನಿಂದ 2016 ರಿಂದ ಇಲ್ಲಿಯವರೆಗೆ ಆರು ಮಂದಿ ಕಾಣೆಯಾಗಿದ್ದಾರೆ ಎಂದು ತಮಿಳುನಾಡು ಪೊಲೀಸರು ಗುರುವಾರ ಮದ್ರಾಸ್ ಹೈಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.

ನ್ಯಾಯಮೂರ್ತಿಗಳಾದ ಎಂ.ಎಸ್.ರಮೇಶ್ ಮತ್ತು ಸುಂದರ್ ಮೋಹನ್ ಅವರ ನ್ಯಾಯಪೀಠದ ಮುಂದೆ ಪೊಲೀಸರು ಮೌಖಿಕವಾಗಿ ಈ ಹೇಳಿಕೆ ನೀಡಿದ್ದಾರೆ. ಕಾಣೆಯಾದ ಪ್ರಕರಣಗಳ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಪೊಲೀಸರ ಹೇಳಿಕೆಯನ್ನು ದಾಖಲಿಸಿಕೊಂಡಿರುವ ನ್ಯಾಯಾಲಯವು ಮುಂದಿನ ವಿಚಾರಣೆಯ ಏಪ್ರಿಲ್ 18ಕ್ಕೆ ಮುಂದೂಡಿದ್ದು, ತನಿಖೆಯ ಸ್ಥಿತಿಗತಿ ವರದಿಯನ್ನು ಅಂದು ಸಲ್ಲಿಸಲು ಪೊಲೀಸರಿಗೆ ನಿರ್ದೇಶನ ನೀಡಿತು.

ತಿರುನೆಲ್ವೇಲಿ ಜಿಲ್ಲೆಯ ನಿವಾಸಿ ತಿರುಮಲೈ ಎಂಬವರು ತಮ್ಮ ಸಹೋದರ ಗಣೇಶನ್ ಅವರನ್ನು ಹಾಜರುಪಡಿಸುವಂತೆ ಕೋರಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ನಿರ್ದೇಶನ ನೀಡಿದೆ.

46 ವರ್ಷದ ಗಣೇಶನ್ ಕಳೆದ ವರ್ಷ ಮಾರ್ಚ್‌ನಲ್ಲಿ ಇಶಾ ಫೌಂಡೇಶನ್‌ನಿಂದ ಕಾಣೆಯಾದ ನಂತರ ತಿರುಮಲೈ ನ್ಯಾಯಾಲಯದ ಮೊರೆ ಹೋಗಿದ್ದರು. ಹಲವಾರು ದಿನಗಳಿಂದ ತನ್ನ ಸಹೋದರನೊಂದಿಗೆ ಸಂಪರ್ಕವನ್ನು ಸ್ಥಾಪಿಸಲು ಸಾಧ್ಯವಾಗದ ಕಾರಣ ತಾನು ಇಶಾ ಫೌಂಡೇಶನ್ ಅನ್ನು ಸಂಪರ್ಕಿಸಿದ್ದೆ ಎಂದು ಅವರು ಗುರುವಾರ ನ್ಯಾಯಾಲಯಕ್ಕೆ ತಿಳಿಸಿದರು. ಆದಾಗ್ಯೂ, ಆಶ್ರಮದಲ್ಲಿ ಕೆಲಸ ಮಾಡುತ್ತಿದ್ದ ನನ್ನ ಸಹೋದರ ಎರಡು ದಿನಗಳಿಂದ ವರದಿ ಮಾಡಿಕೊಂಡಿಲ್ಲ ಎಂದು ಫೌಂಡೇಶನ್ ಆ ಸಮಯದಲ್ಲಿ ತನಗೆ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ತಾನು ತಿರುಮಲೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೆ ಎಂದು ಅವರು ವಿವರಿಸಿದ್ದಾರೆ.

Related Stories

No stories found.
Kannada Bar & Bench
kannada.barandbench.com