ಮುಡಾ ಪ್ರಕರಣ: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಜಾ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ ಸ್ನೇಹಮಯಿ ಕೃಷ್ಣ

ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಫೆಬ್ರವರಿ 7ರಂದು ವಜಾಗೊಳಿಸಿತ್ತು.
CM Siddaramaiah, CBI, Karnataka HC
CM Siddaramaiah, CBI, Karnataka HC
Published on

ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಬಿಂದುವಾಗಿರುವ ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ನಿರಾಕರಿಸಿ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠವು ನೀಡಿರುವ ಆದೇಶವನ್ನು ಪ್ರಶ್ನಿಸಿ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಫೆಬ್ರವರಿ 7ರಂದು ವಜಾ ಮಾಡಿತ್ತು.

Also Read
ಮುಡಾ ವಿವಾದ: ಸಿಎಂ ಸಿದ್ದು ಸಹಿತ ನಾಲ್ವರ ವಿರುದ್ದದ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯಕ್ಕೆ 'ಬಿʼ ರಿಪೋರ್ಟ್‌ ಸಲ್ಲಿಕೆ

ವಿಚಾರಣಾಧೀನ ನ್ಯಾಯಾಲಯಕ್ಕೆ ಸಿಆರ್‌ಪಿಸಿ ಸೆಕ್ಷನ್‌ 156(3) ಅಡಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಧಿಕಾರವಿಲ್ಲ.‌ ಈ ಅಧಿಕಾರ ಹೈಕೋರ್ಟ್‌ಗೆ ಸಂವಿಧಾನದ 22ನೇ ವಿಧಿ ಮತ್ತು ಸುಪ್ರೀಂ ಕೋರ್ಟ್‌ಗೆ ಸಂವಿಧಾನದ 32 ಅಥವಾ 142ನೇ ವಿಧಿಯಡಿ ಮಾತ್ರ ಇದೆ ಎಂಬುದನ್ನು ಅರ್ಥೈಸಿಕೊಳ್ಳುವಲ್ಲಿ ಹೈಕೋರ್ಟ್‌ ವಿಫಲವಾಗಿದೆ. ಅಲ್ಲದೇ, ಪ್ರಕರಣವನ್ನು ಸಿಬಿಐ ಅಥವಾ ಬೇರಾವುದಾದರೂ ಸ್ವತಂತ್ರ ತನಿಖಾ ಸಂಸ್ಥೆ ನಡೆಸಬೇಕು ಎಂದು ಆರಂಭದಿಂದಲೂ ಕೋರುತ್ತಿರುವುದಾಗಿ ಸ್ನೇಹಮಯಿ ಕೃಷ್ಣ ವಿವರಿಸಿದ್ದಾರೆ.

Also Read
ಮುಡಾ ಪ್ರಕರಣ: ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾ ಮಾಡಿದ ಹೈಕೋರ್ಟ್‌; ಸಿಎಂ ಸಿದ್ದರಾಮಯ್ಯ ಸದ್ಯ ನಿರಾಳ

ಫೆಬ್ರವರಿ 20ರಂದು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ವಿಚಾರಣಾಧೀನ ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದಾರೆ. ಇದನ್ನು ಪ್ರಶ್ನಿಸಿ ಪ್ರತಿಭಟನಾ ಅರ್ಜಿ ಸಲ್ಲಿಸುವುದಾಗಿ ಸ್ನೇಹಮಯಿ ಕೃಷ್ಣ ವಿಚಾರಣೆ ನ್ಯಾಯಾಲಯದಲ್ಲಿ ವಾದಿಸಿದ್ದರು.

Kannada Bar & Bench
kannada.barandbench.com