ಲೋಕಾಯುಕ್ತ ಪೊಲೀಸರ ವರದಿ ತಿರಸ್ಕರಿಸಿದ ವಿಶೇಷ ನ್ಯಾಯಾಲಯ: ಬಿಎಸ್‌ವೈ ಡಿನೋಟಿಫಿಕೇಷನ್‌ ಆರೋಪ ಮರುತನಿಖೆಗೆ ಆದೇಶ

ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣ ಮುಕ್ತಾಯಗೊಳಿಸುವಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ʼಬಿʼ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.
B S Yediyurappa
B S Yediyurappa

ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣ ಮುಕ್ತಾಯಗೊಳಿಸುವಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ʼಬಿʼ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ಶನಿವಾರ ಈ ಸಂಬಂಧ ಆದೇಶ ನೀಡಿರುವ ವಿಶೇಷ ನ್ಯಾಯಾಲಯ ಜನವರಿ 18ರಂದು ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ವರದಿಯನ್ನು ತಿರಸ್ಕರಿಸಿರರುವುದಾಗಿ ಹೇಳಿದ್ದು ಆರೋಪಗಳ ಮರು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿದೆ.

ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿಯಲ್ಲಿ ಐ ಟಿ ಕಾರಿಡಾರ್‌ ನಿರ್ಮಿಸಲೆಂದು ಸರ್ಕಾರ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಅಕ್ರಮವಾಗಿ ಡಿ ನೋಟಿಫೈ ಮಾಡಲಾಗಿದೆ ಎಂದು ಆರೋಪಿಸಿ ಬೆಂಗಳೂರಿನ ವಾಸುದೇವ ರೆಡ್ಡಿ ಎಂಬುವವರು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ 2013ರಲ್ಲಿ ಖಾಸಗಿ ದೂರು ನೀಡಿದ್ದರು. ನ್ಯಾಯಾಲಯದ ಸೂಚನೆ ಮೇರೆಗೆ 2015ರಲ್ಲಿ ದೂರು ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದರು.

ಇತ್ತ ಪ್ರಕರಣ ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ ಮೊರೆ ಹೋಗಿದ್ದರು. ಆದರೆ ಕಳೆದ ಡಿಸೆಂಬರ್‌ನಲ್ಲಿ ಅದನ್ನು ತಿರಸ್ಕರಿಸಿದ್ದ ಉಚ್ಚ ನ್ಯಾಯಾಲಯ ವಿಶೇಷ ನ್ಯಾಯಾಲಯದ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಅಲ್ಲದೆ, ಬೆಂಗಳೂರು ನಗರದ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಬಾಕಿ ಇರುವ, ವಾಸುದೇವ ರೆಡ್ಡಿ ಎನ್ನುವವರು ತಮ್ಮ ವಿರುದ್ಧ ದಾಖಲಿಸಿದ್ದ ಖಾಸಗಿ ದೂರನ್ನು ವಜಾಗೊಳಿಸುವಂತೆ ಕೋರಿದ್ದ ಯಡಿಯೂರಪ್ಪನವರ ಮನವಿಯನ್ನೂ ಹೈಕೋರ್ಟ್‌ ತಿರಸ್ಕರಿಸಿತ್ತು.

ತನಿಖೆಯಲ್ಲಿ ನಿರ್ಲಕ್ಷ್ಯವನ್ನು ತೋರಿರುವ ಲೋಕಾಯುಕ್ತ ಪೊಲೀಸರ ವರ್ತನೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾ. ಜಾನ್‌ ಮೈಕೆಲ್‌ ಕುನ್ಹಾ ಅವರಿದ್ದ ಹೈಕೋರ್ಟ್‌ನ ಏಕ ಸದಸ್ಯ ಪೀ ಜನಪ್ರತಿನಿಧಿಗಳನ್ನು ಒಳಗೊಂಡಿರುವ ಕ್ರಿಮಿನಲ್‌ ಪ್ರಕರಣದ ತನಿಖೆಗಳ ಬಗ್ಗೆ ವಿಶೇಷ ಗಮನ ವಹಿಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಸೂಚಿಸಿತ್ತು.

ಜನವರಿ 18ರಂದು 10,000 ಪುಟಗಳ ದಾಖಲೆಗಳೊಂದಿಗೆ ಸಿ ವರದಿ ಸಲ್ಲಿಸಿದ್ದ ಲೋಕಾಯುಕ್ತ ಪೊಲೀಸರುಪ್ರಕರಣದ ವಿಚಾರಣೆ ಕೈ ಬಿಡುವಂತೆ ಶಿಫಾರಸು ಮಾಡಿದ್ದರು. ಆದರೆ ಇದಕ್ಕೆ ಅರ್ಜಿದಾರರ ಪರ ವಕೀಲರಿಂದ ಆಕ್ಷೇಪ ವ್ಯಕ್ತವಾಗಿತ್ತು. ಬಿ ವರದಿಯನ್ನು ಪುರಸ್ಕರಿಸದೆ ವಿಚಾರಣೆ ನಡೆಸಬೇಕು ಎಂದು ಅವರು ಕೋರಿದ್ದರು. ಈ ಬಗ್ಗೆ ವಿಚಾರಣೆ ನಡೆಸಿರುವ ನ್ಯಾಯಾಲಯ ಮರು ತನಿಖೆ ನಡೆಸಿ ವರದಿ ಸಲ್ಲಿಸಲು ಶನಿವಾರ ಆದೇಶಿಸಿದೆ.

Related Stories

No stories found.
Kannada Bar & Bench
kannada.barandbench.com