ರಾಜ್ಯದಲ್ಲಿ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಗಂಭೀರ ಚಿಂತನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

"ರಾಷ್ಟ್ರಪಿತ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಗ್ರಾಮ ಸ್ವರಾಜ್ಯ ಮತ್ತು ಅಧಿಕಾರ ವಿಕೇಂದ್ರೀಕರಣದ ಆಶಯದಂತೆ ಗ್ರಾಮ ನ್ಯಾಯಾಲಯಗಳ ಸ್ಥಾಪನೆಯಾದರೆ ಗ್ರಾಮಸ್ಥರಿಗೆ ಬಹಳ ಸಹಾಯಕವಾಗಲಿದೆ" ಎಂದು ಹೇಳಿದ ಸಿಎಂ.
CM Siddaramaiah, Law and Parliamentary affairs Minister H K Patil
CM Siddaramaiah, Law and Parliamentary affairs Minister H K Patil Gandhi Gram Puraskar 2023

ರಾಜ್ಯದಲ್ಲಿ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಗಂಭೀರ ಚಿಂತನೆ ನಡೆಸಿರುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಗಾಂಧಿ ಜಯಂತಿ ಅಂಗವಾಗಿ ವಿಧಾನಸೌಧದ ಬ್ಯಾಂಕ್ವಟ್ ಹಾಲ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ ಸೋಮವಾರ ಹಮ್ಮಿಕೊಂಡಿದ್ದ 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಸ್ವಚ್ಚ ಸರ್ವೇಕ್ಷಣಾ ಗ್ರಾಮೀಣ ರಾಜ್ಯ ಮಟ್ಟದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

Also Read
ಧಾರವಾಡ, ಕಲಬುರ್ಗಿಗಳಲ್ಲಿ ಹೈಕೋರ್ಟ್ ಪೀಠಗಳ ಸ್ಥಾಪನೆ ಪ್ರಶ್ನಿಸಿದ್ದ ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌

ಮಾಜಿ ಸಚಿವ ಅಬ್ದುಲ್‌ ನಜೀರ್‌ ಸಾಬ್‌ (ನೀರ್‌ ಸಾಬ್‌ ಎಂದೇ ಖ್ಯಾತರಾಗಿದ್ದ ರಾಜಕಾರಣಿ) ಅವರಿದ್ದಾಗ ಗ್ರಾಮ ನ್ಯಾಯಾಲಯಗಳ ಬಗ್ಗೆ ಪ್ರಸ್ತಾಪಿಸಿದ್ದರು. ಈಗ ಕಾನೂನು ಸಚಿವ ಎಚ್‌ ಕೆ ಪಾಟೀಲ್‌ ಅವರು ಕೂಡ ಗ್ರಾಮ ನ್ಯಾಯಾಲಯಗಳನ್ನು ಅಸ್ತಿತ್ವಕ್ಕೆ ತರುವ ಬಗ್ಗೆ ಪ್ರಸ್ತಾಪಿಸುತ್ತಲೇ ಇದ್ದಾರೆ. ಗ್ರಾಮ ಮಟ್ಟದ ವ್ಯಾಜ್ಯಗಳು ಸ್ಥಳೀಯವಾಗಿ ಬಗೆಹರಿಯಬೇಕು ಎಂಬ ಆಶಯ ಸರ್ಕಾರದ್ದಾಗಿದೆ ಎಂದು ಅವರು ವಿವರಿಸಿದರು.

"ಹಳ್ಳಿಗಳಲ್ಲಿಯೇ ಗ್ರಾಮಗಳ ವ್ಯಾಜ್ಯಗಳನ್ನು ಬಗೆಹರಿಸಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಷ್ಟ್ರಪಿತ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಗ್ರಾಮ ಸ್ವರಾಜ್ಯ ಮತ್ತು ಅಧಿಕಾರ ವಿಕೇಂದ್ರೀಕರಣದ ಆಶಯದಂತೆ ಗ್ರಾಮ ನ್ಯಾಯಾಲಯಗಳ ಸ್ಥಾಪನೆಯಾದರೆ ಗ್ರಾಮಸ್ಥರಿಗೆ ಬಹಳ ಸಹಾಯಕವಾಗಲಿದೆ" ಎಂದು ಅವರು ಹೇಳಿದರು.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ವಿಧಾನ ಪರಿಷತ್‌ ಸಚೇತಕ ಸಲೀಂ ಅಹಮದ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ಮತ್ತಿತರರು ಕಾರ್ಯಕ್ರಮಲ್ಲಿ ಭಾಗವಹಿಸಿದ್ದರು.

Related Stories

No stories found.
Kannada Bar & Bench
kannada.barandbench.com