ರಾಜ್ಯದಲ್ಲಿ 100 ಹೊಸ ಗ್ರಾಮ ನ್ಯಾಯಾಲಯ ಸ್ಥಾಪಿಸಲು ಸರ್ಕಾರದ ತಾತ್ವಿಕ ನಿರ್ಧಾರ: ರಾಜ್ಯಪಾಲ ಗೆಹ್ಲೋಟ್‌

ಜಂಟಿ ಸದನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸುವ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದನ್ನು ಇಲ್ಲಿ ನೆನೆಯಬಹುದು.
ರಾಜ್ಯದಲ್ಲಿ 100 ಹೊಸ ಗ್ರಾಮ ನ್ಯಾಯಾಲಯ ಸ್ಥಾಪಿಸಲು ಸರ್ಕಾರದ ತಾತ್ವಿಕ ನಿರ್ಧಾರ: ರಾಜ್ಯಪಾಲ ಗೆಹ್ಲೋಟ್‌

ರಾಜ್ಯದಲ್ಲಿ 100 ಹೊಸ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ತಾತ್ವಿಕವಾಗಿ ನಿರ್ಧರಿಸಿದೆ ಎಂದು ಜಂಟಿ ಸದನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಗುರುವಾರ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದ ಗ್ರಾಮೀಣ ಜನರ ಮನೆ ಬಾಗಿಲಿಗೆ ನ್ಯಾಯ ದೊರಕಿಸಿಕೊಡುವ ಮಹತ್ವಾಕಾಂಕ್ಷೆಯ ಭಾಗವಾಗಿ ಭಾರತ ಸಂವಿಧಾನದ 39ಎ ಅನುಚ್ಛೇದದ ಅಡಿಯಲ್ಲಿ ಸಮಾನ ನ್ಯಾಯ ಮತ್ತು ಉಚಿತ ಕಾನೂನು ನೆರವಿಗೆ ಸಂಬಂಧಿಸಿದಂತೆ ರಾಜ್ಯವು ಸಮಾನ ಅವಕಾಶದ ಆಧಾರದ ಮೇಲೆ ನ್ಯಾಯ ಲಭಿಸುವಂತೆ ಕಾನೂನು ವ್ಯವಸ್ಥೆಯ ನಿರ್ವಹಣೆಯನ್ನು ನಿಶ್ಚಿತಗೊಳಿಸಲು ಬಡವರ, ಗ್ರಾಮೀಣ ಜನರ ಮನೆ ಬಾಗಿಲಿಗೆ ನ್ಯಾಯದಾನ ವ್ಯವಸ್ಥೆಯನ್ನು ಕೊಂಡೊಯ್ಯುವ ಉಪಕ್ರಮವಾಗಿ ರಾಜ್ಯದಲ್ಲಿ ರಾಜ್ಯದಲ್ಲಿ 100 ಹೊಸ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ತಾತ್ವಿಕವಾಗಿ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸುವ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದನ್ನು ಇಲ್ಲಿ ನೆನೆಯಬಹುದಾಗಿದೆ.

ಹಾಲಿ ಸರ್ಕಾರ ಬಂದಾಗಿನಿಂದ ಕಂದಾಯ ಇಲಾಖೆಯ ಜಿಲ್ಲಾಧಿಕಾರಿ/ಉಪವಿಭಾಗಾಧಿಕಾರಿ/ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿ ಒಟ್ಟು 93,350 ಪ್ರಕರಣಗಳು ಬಾಕಿ ಇದ್ದು, ಈ ಪೈಕಿ 2024ರ ಫೆಬ್ರವರಿ 5ರವರೆಗೆ 84,253 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. 57,087 ಪ್ರಕರಣಗಳು ಬಾಕಿ ಉಳಿದಿವೆ ಎಂದು ರಾಜ್ಯಪಾಲರು ಭಾಷಣದಲ್ಲಿ ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಾರತ ಸಂವಿಧಾನ ಪೀಠಿಕೆ ವಿನ್ಯಾಸದ ಫೋಟೊವನ್ನು ಅಳವಡಿಸಲು ಹಾಗೂ ಪ್ರತಿನಿತ್ಯ ಪ್ರಾರ್ಥನಾ ಸಮಯದಲ್ಲಿ ಸಂವಿಧಾನ ಪೀಠಿಕೆಯನ್ನು ಓದಲು ಕ್ರಮವಹಿಸಲಾಗುವುದು ಎಂದು ವಿವರಿಸಿದ್ದಾರೆ.

Related Stories

No stories found.
Kannada Bar & Bench
kannada.barandbench.com