ಹೊಸ ಸಿಇಟಿ ರ‍್ಯಾಂಕ್ ಪಟ್ಟಿ ಪ್ರಕಟ: ಆಕ್ಷೇಪಣೆ ಸರಿಪಡಿಸಲು ಸರ್ಕಾರಕ್ಕೆ ನಿರ್ದೇಶನ, ಸೆ.19ಕ್ಕೆ ವಿಚಾರಣೆ ಮುಂದೂಡಿಕೆ

Karnataka HC and Karnataka Examinations Authority
Karnataka HC and Karnataka Examinations Authority
Published on

ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪುನರಾವರ್ತಿತ ವಿದ್ಯಾರ್ಥಿಗಳ 2021ನೇ ಸಾಲಿನ ಪಿಯುಸಿ ಅಂಕಗಳನ್ನು 2022ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸಿ ಹೊಸದಾಗಿ ರ‍್ಯಾಂಕ್ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ನೀಡಿದ್ದ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆಯಾಗಿದೆ.

Also Read
ವೃತ್ತಿಪರ ಕೋರ್ಸ್‌ಗಳಿಗೆ ಹೊಸದಾಗಿ ರ‍್ಯಾಂಕ್ ಪಟ್ಟಿ: ಏಕಸದಸ್ಯ ಪೀಠದ ಆದೇಶದ ವಿರುದ್ಧ ಸರ್ಕಾರದ ಮೇಲ್ಮನವಿ

ರಾಜ್ಯ ಉನ್ನತ ಶಿಕ್ಷಣ ಇಲಾಖೆ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಗುರುವಾರ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ಪೀಠ ನಡೆಸಿತು. ಮೇಲ್ಮನವಿಗೆ ಸಂಬಂಧಿಸಿದಂತೆ ನ್ಯಾಯಾಲಯ ಕಚೇರಿಯ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ರಾಜ್ಯ ಸರ್ಕಾರದ ಪರ ವಕೀಲರಿಗೆ ಸೂಚಿಸಿದ ಪೀಠವು ವಿಚಾರಣೆಯನ್ನು ಸೆಪ್ಟೆಂಬರ್‌ 19ಕ್ಕೆ ಮುಂದೂಡಿತು. 

Kannada Bar & Bench
kannada.barandbench.com