[ಸಿಜೆಗಳ ಸಮ್ಮೇಳನ] ನ್ಯಾಯಾಂಗ ಮೂಲಸೌಕರ್ಯ ಹೆಚ್ಚಿಸಲು ಪ್ರಾಧಿಕಾರ ರಚನೆಗೆ ಸೂಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಗ್ಗೂಡಿ ನ್ಯಾಯಾಂಗಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಒದಗಿಸಬೇಕೆನ್ನುವುದು ಸರ್ವೋಚ್ಚ ನ್ಯಾಯಾಲಯದ ಬಯಕೆ. ಅದರಂತೆ ರಾಜ್ಯದಲ್ಲಿ ಒಂದು ಪ್ರಾಧಿಕಾರವನ್ನು ರಚಿಸಬೇಕು ಎಂದು ತಿಳಿಸಲಾಗಿದೆ ಎಂದ ಸಿಎಂ.
[ಸಿಜೆಗಳ ಸಮ್ಮೇಳನ] ನ್ಯಾಯಾಂಗ ಮೂಲಸೌಕರ್ಯ ಹೆಚ್ಚಿಸಲು ಪ್ರಾಧಿಕಾರ ರಚನೆಗೆ ಸೂಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನ್ಯಾಯಾಂಗದಲ್ಲಿ ಮೂಲಸೌಕರ್ಯ ಹೆಚ್ಚಿಸುವ ಸಲುವಾಗಿ ಪ್ರಾಧಿಕಾರವೊಂದನ್ನು ರಚಿಸಬೇಕು ಎಂದು ಮುಖ್ಯಮಂತ್ರಿಗಳ ಮತ್ತು ಮುಖ್ಯ ನ್ಯಾಯಮೂರ್ತಿಗಳ ಸಮ್ಮೇಳನದಲ್ಲಿ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ನವದೆಹಲಿಯಲ್ಲಿ ಶನಿವಾರ ನಡೆದ ಮುಖ್ಯಮಂತ್ರಿಗಳ ಹಾಗೂ ಭಾರತದ ಎಲ್ಲ ರಾಜ್ಯಗಳ ಮುಖ್ಯ ನ್ಯಾಯಮೂರ್ತಿಗಳ ಸಮ್ಮೇಳನದಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ನ್ಯಾಯಾಂಗದಲ್ಲಿ ಮೂಲಸೌಕರ್ಯವನ್ನು ಕಲ್ಪಿಸುವ ಬಗ್ಗೆ ಸಮ್ಮೇಳನದಲ್ಲಿ ವಿಶೇಷವಾಗಿ ಚರ್ಚೆಯಾಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಗ್ಗೂಡಿ ನ್ಯಾಯಾಂಗಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಒದಗಿಸಬೇಕೆನ್ನುವುದು ಸರ್ವೋಚ್ಚ ನ್ಯಾಯಾಲಯದ ಬಯಕೆ. ಅದರಂತೆ ರಾಜ್ಯದಲ್ಲಿ ಒಂದು ಪ್ರಾಧಿಕಾರವನ್ನು ರಚಿಸಬೇಕು ಎಂದು ತಿಳಿಸಲಾಗಿದೆ ಎಂದು ಅವರು ವಿವರಿಸಿದರು.

ಹೀಗೆ ರಚಿತವಾಗುವ ಮೂಲಸೌಕರ್ಯ ಪ್ರಾಧಿಕಾರದ ನೇತೃತ್ವವನ್ನು ಮುಖ್ಯ ನ್ಯಾಯಮೂರ್ತಿಗಳು ವಹಿಸಿಕೊಳ್ಳಲಿದ್ದಾರೆ. ಆ ಸಮಿತಿಯಲ್ಲಿ ಮುಖ್ಯಮಂತ್ರಿಗಳು, ಕಾನೂನು ಸಚಿವರು, ಹಿರಿಯ ಅಧಿಕಾರಗಳಿರಬೇಕು. ಅವರ ಮೂಲಕ ಮೂಲಸೌಕರ್ಯಗಳನ್ನು ಒದಗಿಸಬೇಕು ಹಾಗೂ ಮೇಲ್ವಿಚಾರಣೆಯನ್ನೂ ಕೈಗೊಳ್ಳಬೇಕು ಎಂದು ತಿಳಿಸಲಾಯಿತು ಎಂದು ಅವರು ತಿಳಿಸಿದರು.

ನ್ಯಾಯಮೂರ್ತಿಗಳ ಹುದ್ದೆಗಳ ಭರ್ತಿಗೆ ಸೂಚನೆ:

ಅತಿ ಶೀಘ್ರದಲ್ಲಿ ಎಲ್ಲರಿಗೂ ನ್ಯಾಯ ಸಿಗಲು ನ್ಯಾಯದಾನ ವ್ಯವಸ್ಥೆಯನ್ನು ಬಲಪಡಿಸಬೇಕು. ನ್ಯಾಯಮೂರ್ತಿಗಳ ಹುದ್ದೆಗಳು ಎಲ್ಲೆಲ್ಲಿ ಮಂಜೂರಾಗಿದೆಯೋ ಅವುಗಳನ್ನು ಕೂಡಲೇ ಭರ್ತಿ ಮಾಡಲು ಸೂಚಿಸಲಾಗಿದೆ ಎಂದರು.

Related Stories

No stories found.
Kannada Bar & Bench
kannada.barandbench.com