ಸಿಬಿಐ ನೂತನ ನಿರ್ದೇಶಕರಾಗಿ ಸುಬೋಧ್ ಕುಮಾರ್ ಜೈಸ್ವಾಲ್ ನೇಮಕ

ಜೈಸ್ವಾಲ್ ಅವರ ಅಧಿಕಾರಾವಧಿ ಎರಡು ವರ್ಷಗಳವರೆಗೆ ಇರುತ್ತದೆ.
ಸಿಬಿಐ ನೂತನ ನಿರ್ದೇಶಕರಾಗಿ ಸುಬೋಧ್ ಕುಮಾರ್ ಜೈಸ್ವಾಲ್ ನೇಮಕ
Subodh Jaiswal

ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಸಿಬಿಐ ನೂತನ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ, ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಹಾಗೂ ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಅವರಿದ್ದ ಮೂವರು ಸದಸ್ಯರ ಸಮಿತಿ ಶಿಫಾರಸಿನ ಆಧಾರದ ಮೇಲೆ ಈ ನೇಮಕಾತಿಗೆ ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿತು.

1985ರ ಬ್ಯಾಚ್ ಐಪಿಎಸ್‌ ಅಧಿಕಾರಿಯಾಗಿರುವ ಜೈಸ್ವಾಲ್ ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಅವರು ಮಹಾರಾಷ್ಟ್ರದ ಪೊಲೀಸ್ ಮಹಾನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಅವರ ಅಧಿಕಾರಾವಧಿ ಎರಡು ವರ್ಷಗಳು.

ನೇಮಕಾತಿ ಕುರಿತಂತೆ ಸರ್ಕಾರ ಬರೆದಿರುವ ಪತ್ರವನ್ನು ಇಲ್ಲಿ ಓದಬಹುದು:

Related Stories

No stories found.