ಕರ್ನಾಟಕ ಹೈಕೋರ್ಟ್‌ಗೆ ಏ.24ರಿಂದ ಮೇ 20ರವರೆಗೆ ಬೇಸಿಗೆ ರಜೆ; ಎಂಟು ದಿನ ಕರ್ತವ್ಯ ನಿರ್ವಹಿಸಲಿರುವ ರಜಾಕಾಲೀನ ಪೀಠಗಳು

ರಜೆ ವೇಳೆ ಏ.25, 27,ಮೇ 2, 4, 9, 11,16,18ರಂದು ಒಂದು ವಿಭಾಗೀಯ ಮತ್ತು ಎರಡು ಏಕಸದಸ್ಯ ಪೀಠಗಳು ವಿಚಾರಣೆ ನಡೆಸಲಿವೆ. ಧಾರವಾಡ, ಕಲಬುರ್ಗಿ ಪೀಠಗಳಲ್ಲಿ ವಿಭಾಗೀಯ ಪೀಠದ ಪ್ರಕರಣಗಳ ನಂತರ ಅದೇ ನ್ಯಾಯಮೂರ್ತಿಗಳು ಏಕಸದಸ್ಯ ಪೀಠದಲ್ಲಿರಲಿದ್ದಾರೆ.
Karnataka High Court
Karnataka High Court

ಕರ್ನಾಟಕ ಹೈಕೋರ್ಟ್‌ಗೆ ಏಪ್ರಿಲ್‌ 24ರಿಂದ ಮೇ 20ರವರೆಗೆ ಬೇಸಿಗೆ ರಜೆ ಇರಲಿದೆ. ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರ್ಗಿಯಲ್ಲಿ ವಿಭಾಗೀಯ ಮತ್ತು ಏಕಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲೀನ ಪೀಠಗಳನ್ನು ರಚಿಸಲಾಗಿದೆ.

ಪ್ರಧಾನ ಪೀಠದಲ್ಲಿ ಏಪ್ರಿಲ್‌ 25 ಮತ್ತು 27ರಂದು ನ್ಯಾಯಮೂರ್ತಿಗಳಾದ ಎಸ್‌ ಸುನಿಲ್‌ ದತ್‌ ಯಾದವ್‌ ಮತ್ತು ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠವು ಕಾರ್ಯ ನಿರ್ವಹಿಸಲಿದೆ. ನ್ಯಾಯಮೂರ್ತಿಗಳಾದ ರವಿ ವಿ. ಹೊಸಮನಿ ಮತ್ತು ಸಿ ಎಂ ಪೂಣಚ್ಚ ಅವರ ನೇತೃತ್ವದ ಏಸಕದಸ್ಯ ಪೀಠಗಳು ರಜಾಕಾಲೀನ ಪೀಠಗಳಾಗಿ ಕರ್ತವ್ಯ ನಿರ್ವಹಿಸಲಿವೆ. ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿಗಳಾದ ಹೇಮಂತ್‌ ಚಂದನಗೌಡರ್‌ ಮತ್ತು ಸಿ ಎಂ ಜೋಶಿ ಅವರು ಮೊದಲಿಗೆ ವಿಭಾಗೀಯ ಪೀಠದ ಪ್ರಕರಣಗಳನ್ನು ಆಲಿಸಲಿದ್ದು, ಆನಂತರ ಏಕಸದಸ್ಯ ಪೀಠದಲ್ಲಿ ಕುಳಿತು ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ. ಕಲಬುರ್ಗಿ ಪೀಠದಲ್ಲಿ ನ್ಯಾಯಮೂರ್ತಿಗಳಾದ ಎಸ್‌ ಜಿ ಪಂಡಿತ್‌ ಮತ್ತು ಅಶೋಕ್‌ ಎಸ್‌. ಕಿಣಗಿ ಅವರು ಮೊದಲಿಗೆ ವಿಭಾಗೀಯ ಪೀಠದ ಪ್ರಕರಣಗಳ ವಿಚಾರಣೆ ಮುಗಿಸಿ, ಆನಂತರ ಏಕಸದಸ್ಯ ಪೀಠದಲ್ಲಿ ಕುಳಿತುಕೊಳ್ಳಲಿದ್ದಾರೆ.

ಮೇ 2 ಮತ್ತು 4ರಂದು ನ್ಯಾಯಮೂರ್ತಿಗಳಾದ ಕೃಷ್ಣ ಎಸ್‌. ದೀಕ್ಷಿತ್‌ ಮತ್ತು ವಿಜಯಕುಮಾರ್‌ ಎ. ಪಾಟೀಲ್‌ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಲಿದ್ದು, ನ್ಯಾಯಮೂರ್ತಿಗಳಾದ ಎನ್‌ ಎಸ್‌ ಸಂಜಯ್‌ ಗೌಡ ಮತ್ತು ಜಿ ಬಸವರಾಜ ಅವರ ನೇತೃತ್ವದ ಏಕಸದಸ್ಯ ಪೀಠಗಳು ಅರ್ಜಿಗಳ ವಿಚಾರಣೆ ನಡೆಸಲಿವೆ. ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿಗಳಾದ ಹಂಚಾಟೆ ಸಂಜೀವ್‌ಕುಮಾರ್‌ ಮತ್ತು ಅನಿಲ್‌ ಬಿ. ಕಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ಮೊದಲಿಗೆ ವಿಭಾಗೀಯ ಪೀಠದ ಪ್ರಕರಣ ಆಲಿಸಲಿದೆ. ನಂತರ ನ್ಯಾಯಮೂರ್ತಿಗಳು ಪ್ರತ್ಯೇಕವಾಗಿ ಏಕಸದಸ್ಯ ಪೀಠದಲ್ಲಿ ಕುಳಿತು ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ. ಕಲಬುರ್ಗಿ ಪೀಠದಲ್ಲಿ ನ್ಯಾಯಮೂರ್ತಿಗಳಾದ ಎಸ್‌ ವಿಶ್ವಜಿತ್‌ ಶೆಟ್ಟಿ ಮತ್ತು ಎಂ ಜಿ ಸಿ ಕಮಲ್‌ ಅವರ ನೇತೃತ್ವದ ವಿಭಾಗೀಯ ಪೀಠವು ಮೊದಲಿಗೆ ವಿಭಾಗೀಯ ಪೀಠದ ಪ್ರಕರಣಗಳ ವಿಚಾರಣೆ ನಡೆಸಲಿದೆ. ಆನಂತರ ನ್ಯಾಯಮೂರ್ತಿಗಳು ಏಕಸದಸ್ಯ ಪೀಠದಲ್ಲಿ ಕುಳಿತು ವಿಚಾರಣೆ ನಡೆಸಲಿದ್ದಾರೆ.

ಮೇ 9 ಮತ್ತು 11ರಂದು ನ್ಯಾಯಮೂರ್ತಿಗಳಾದ ಎಸ್‌ ಆರ್‌ ಕೃಷ್ಣ ಕುಮಾರ್‌ ಮತ್ತು ಟಿ ವೆಂಕಟೇಶ್‌ ನಾಯ್ಕ್‌ ಅವರು ವಿಭಾಗೀಯ ಪೀಠದಲ್ಲಿ ಪ್ರಕರಣಗಳ ವಿಚಾರಣೆ ನಡೆಸಲಿದ್ದು, ನ್ಯಾಯಮೂರ್ತಿಗಳಾದ ಉಮೇಶ್‌ ಎಂ. ಅಡಿಗ ಹಾಗೂ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ಏಕಸದಸ್ಯ ಪೀಠವು ಕರ್ತವ್ಯ ನಿರ್ವಹಿಸಲಿವೆ. ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿಗಳಾದ ಕೆ ಎಸ್‌ ಹೇಮಲೇಖಾ ಮತ್ತು ಜಿ ಬಸವರಾಜ ಅವರ ವಿಭಾಗೀಯ ಪೀಠವು ಮೊದಲಿಗೆ ಪ್ರಕರಣ ಆಲಿಸಿ, ಆನಂತರ ನ್ಯಾಯಮೂರ್ತಿಗಳು ಏಕಸದಸ್ಯ ಪೀಠದ ಪ್ರಕರಣಗಳನ್ನು ಪ್ರತ್ಯೇಕವಾಗಿ ಆಲಿಸಲಿದ್ದಾರೆ. ಕಲಬುರ್ಗಿ ಪೀಠದಲ್ಲಿ ನ್ಯಾಯಮೂರ್ತಿಗಳಾದ ಇ ಎಸ್‌ ಇಂದಿರೇಶ್‌ ಮತ್ತು ರಾಮಚಂದ್ರ ಡಿ. ಹುದ್ದಾರ್‌ ಅವರು ವಿಭಾಗೀಯ ಪೀಠದ ಪ್ರಕರಣಗಳ ಬಳಿಕ ಏಕಸದಸ್ಯ ಪೀಠ ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ.

ಮೇ 16ರ ಮತ್ತು 18ರಂದು ನ್ಯಾಯಮೂರ್ತಿಗಳಾದ ಎಚ್‌ ಟಿ ನರೇಂದ್ರ ಪ್ರಸಾದ್‌ ಮತ್ತು ಎಸ್‌ ರಾಚಯ್ಯ ಅವರ ನೇತೃತ್ವದ ವಿಭಾಗೀಯ ಪೀಠ, ನ್ಯಾಯಮೂರ್ತಿಗಳಾದ ಎಂ ಜಿ ಉಮಾ ಹಾಗೂ ಅನಂತ್‌ ರಾಮನಾಥ್‌ ಹೆಗ್ಡೆ ಅವರ ನೇತೃತ್ವದ ಏಕಸದಸ್ಯ ಪೀಠವುಗಳು ಅರ್ಜಿಗಳ ವಿಚಾರಣೆ ನಡೆಸಲಿವೆ. ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಚಿನ್‌ ಶಂಕರ್‌ ಮಗದುಮ್‌ ಮತ್ತು ಎಂ ನಾಗಪ್ರಸನ್ನ ಅವರ ನೇತೃತ್ವದ ವಿಭಾಗೀಯ ಪೀಠವು ಪ್ರಕರಣ ವಿಚಾರಣೆ ನಡೆಸಲಿದೆ. ಬಳಿಕ ನ್ಯಾಯಮೂರ್ತಿಗಳು ಪ್ರತ್ಯೇಕವಾಗಿ ಏಕಸದಸ್ಯ ಪೀಠದ ಪ್ರಕರಣಗಳನ್ನು ಆಲಿಸಲಿದ್ದಾರೆ. ಕಲಬುರ್ಗಿ ಪೀಠದಲ್ಲಿ ನ್ಯಾಯಮೂರ್ತಿಗಳಾದ ಹಂಚಾಟೆ ಸಂಜೀವ್‌ಕುಮಾರ್‌ ಮತ್ತು ರಾಜೇಶ್‌ ರೈ ಕೆ ಅವರು ವಿಭಾಗೀಯ ಪೀಠದ ಪ್ರಕರಣಗಳ ಬಳಿಕ ಏಕಸದಸ್ಯ ಪೀಠದಲ್ಲಿ ಕುಳಿತು ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ.

ತಡೆಯಾಜ್ಞೆ, ಮಧ್ಯಂತರ ನಿರ್ದೇಶನ ಮತ್ತು ತಾತ್ಕಾಲಿಕ ಪ್ರತಿಬಂಧಕಾದೇಶ ಇತ್ಯಾದಿ ಪ್ರಕರಣಗಳ ವಿಚಾರಣೆಯನ್ನು ಮಾತ್ರ ರಜಾಕಾಲೀನ ಅವಧಿಯಲ್ಲಿ ನಡೆಸಲಾಗುತ್ತದೆ. ಮೇಲ್ಮನವಿ, ಕ್ರಿಮಿನಲ್‌ ಮೇಲ್ಮನವಿ, ಕ್ರಿಮಿನಲ್‌ ಅರ್ಜಿ, ಸಿವಿಲ್‌ ರೂಪದ ಅರ್ಜಿಗಳ ವಿಚಾರಣೆ ಇರುವುದಿಲ್ಲ. ಇ-ಫೈಲಿಂಗ್‌ ಪೋರ್ಟಲ್‌ ಮೂಲಕ ಇ-ಫೈಲಿಂಗ್‌ ಮಾಡಬಹುದಾಗಿದೆ ಎಂದು ರಿಜಿಸ್ಟ್ರಾರ್‌ (ಜುಡಿಷಿಯಲ್)‌ ಎಂ ಚಂದ್ರಶೇಖರ್‌ ರೆಡ್ಡಿ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

Related Stories

No stories found.
Kannada Bar & Bench
kannada.barandbench.com