ವಕೀಲರ ಸಂಘದ ಚುನಾವಣೆ: ಇವಿಎಂ ಪೂರೈಕೆ ಹಾಗೂ ಭದ್ರತೆಗೆ ಕೋರಿಕೆ; ಚುನಾವಣಾ ಆಯೋಗ, ಪೊಲೀಸ್‌ ಆಯುಕ್ತರಿಗೆ ನೋಟಿಸ್‌

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
Election to AAB
Election to AAB
Published on

ಬೆಂಗಳೂರು ವಕೀಲರ ಸಂಘದ ಚುನಾವಣೆಗೆ ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ಒದಗಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ ಆಯೋಗ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ನೋಟಿಸ್ ಜಾರಿಗೊಳಿಸಿದೆ.

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠವು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿರುವ ರಾಜ್ಯ ಚುನಾವಣಾ ಆಯೋಗ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

Also Read
ಎಎಬಿ ಚುನಾವಣೆಗೆ ಮೂರು ದಿನಾಂಕ ಒಳಗೊಂಡ ಪ್ರಸ್ತಾವನೆ ಸಲ್ಲಿಕೆ

ಎಎಬಿ ಪದಾಧಿಕಾರಿಗಳ ಕಾಲಾವಧಿ 2024ರ ಡಿಸೆಂಬರ್ 19ಕ್ಕೆ ಮುಗಿಯಲಿದೆ. ಅದರಂತೆ, ಸಂಘದ ಸಾಮಾನ್ಯ ಮಂಡಳಿಯ 2025-28ರ ಅವಧಿಗೆ 2025ರ ಜನವರಿ ಕೊನೆಯ ವಾರ ಹಾಗೂ ಫೆಬ್ರವರಿ ಎರಡನೇ ವಾರದಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಚುನಾವಣೆಗೆ ಇವಿಎಂಗಳನ್ನು ಒದಗಿಸಬೇಕು ಹಾಗೂ ಅದರ ಸೂಕ್ಷ್ಮ, ಪಾರದರ್ಶಕ ನಿರ್ವಹಣೆಗೆ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಹಾಗೂ ಭದ್ರತೆಗೆ ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ಒದಗಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಲಿಖಿತ ಮನವಿಯನ್ನು ವಕೀಲರ ಸಂಘವು ಸಲ್ಲಿಸಿತ್ತು. ಆದರೆ, ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಸಂಘವು ಹೈಕೋರ್ಟ್‌ನಲ್ಲಿ ಅರ್ಜಿ ದಾಖಲಿಸಿದೆ.

Kannada Bar & Bench
kannada.barandbench.com