ಆರೋಪ ಗಂಭೀರ ಎಂದ ಸುಪ್ರೀಂ: ಭಾರತ ಕುಸ್ತಿ ಒಕ್ಕೂಟದ ಅಧ್ಯಕ್ಷರ ವಿರುದ್ಧದ ಲೈಂಗಿಕ ಕಿರುಕುಳದ ದೂರು ಆಲಿಸಲು ಒಪ್ಪಿಗೆ

ಕುಸ್ತಿಪಟುಗಳು ಎತ್ತಿರುವ ಆರೋಪಗಳು ಗಂಭೀರವಾಗಿದ್ದು, ಅದನ್ನು ಸುಪ್ರೀಂ ಕೋರ್ಟ್ ಪರಿಗಣಿಸುವ ಅಗತ್ಯವಿದೆ ಎಂಬುದಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್ ನೇತೃತ್ವದ ಪೀಠ ತಿಳಿಸಿದೆ.
ಆರೋಪ ಗಂಭೀರ ಎಂದ ಸುಪ್ರೀಂ: ಭಾರತ ಕುಸ್ತಿ ಒಕ್ಕೂಟದ ಅಧ್ಯಕ್ಷರ ವಿರುದ್ಧದ ಲೈಂಗಿಕ ಕಿರುಕುಳದ ದೂರು ಆಲಿಸಲು ಒಪ್ಪಿಗೆ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಕೋರಿ ಕುಸ್ತಿಪಟುಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಮಂಗಳವಾರ ಸಮ್ಮತಿ ಸೂಚಿಸಿದೆ.

ಕುಸ್ತಿಪಟುಗಳು ಎತ್ತಿರುವ ಆರೋಪಗಳು ಗಂಭೀರವಾಗಿದ್ದು, ಅದನ್ನು ಸುಪ್ರೀಂ ಕೋರ್ಟ್ ಪರಿಗಣಿಸುವ ಅಗತ್ಯವಿದೆ ಎಂಬುದಾಗಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್‌ ನೇತೃತ್ವದ ಪೀಠ ತಿಳಿಸಿದೆ.  

"ಭಾರತವನ್ನು ಪ್ರತಿನಿಧಿಸಿರುವ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ (ಬ್ರಿಜ್‌ ಭೂಷಣ್) ಎನ್ನುವ ಗಂಭೀರ ಆರೋಪಗಳು ಅರ್ಜಿಯಲ್ಲಿವೆ. ಪ್ರಕರಣವನ್ನು ನ್ಯಾಯಾಲಯ (ವಿಚಾರಣೆಗೆ) ಪರಿಗಣಿಸುವ ಅಗತ್ಯವಿದೆ" ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.

Also Read
ಕುಸ್ತಿಪಟು ಕಗ್ಗೊಲೆ: ಒಲಿಂಪಿಯನ್ ಸುಶೀಲ್ ಕುಮಾರ್ ಮತ್ತಿತರರ ವಿರುದ್ಧ ದೆಹಲಿ ನ್ಯಾಯಾಲಯದಿಂದ ಆರೋಪ ನಿಗದಿ

ಪ್ರಕರಣವನ್ನು ನ್ಯಾಯಾಲಯದೆದುರು ಪ್ರಸ್ತಾಪಿಸಿದ ಹಿರಿಯ ನ್ಯಾಯವಾದಿ ಕಪಿಲ್‌ ಸಿಬಲ್‌ ಸಂತ್ರಸ್ತರಲ್ಲಿ ಅಪ್ರಾಪ್ತ ವಯಸ್ಕರೂ ಸೇರಿದ್ದಾರೆ ಎಂದರು. "ಇವರು (ಸಂತ್ರಸ್ತರು) ಮಹಿಳಾ ಕುಸ್ತಿಪಟುಗಳು. ಅಪ್ರಾಪ್ತ ವಯಸ್ಕರೂ ಸೇರಿದಂತೆ ಏಳು ಮಂದಿ ಇದ್ದಾರೆ. ಸಮಿತಿಯ ವರದಿ ಬಹಿರಂಗಗೊಂಡಿಲ್ಲ. ಎಫ್‌ಐಆರ್ ದಾಖಲಾಗುತ್ತಿಲ್ಲ. ದಯವಿಟ್ಟು ಅಪ್ರಾಪ್ತೆ ನೀಡಿರುವ ಕೊನೆಯ ದೂರನ್ನು ನೋಡಿ .. ಆಕೆ ಚಿನ್ನದ ಪದಕ ಗೆದ್ದಿದ್ದಾಳೆ " ಎಂದು ಸಿಬಲ್ ಹೇಳಿದರು.

ಪ್ರಕರಣವನ್ನು ವಿಚಾರಣೆಗೆ ಪರಿಗಣಿಸುವ ಮುನ್ನ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಲಯ.  “ಮನವಿಯನ್ನು ಪುರಸ್ಕರಿಸಲಾಗಿದೆ. (ದೂರಿನೊಂದಿಗೆ ನೀಡಿರುವ) ಅರ್ಜಿದಾರರ ಗುರುತನ್ನು ಮರೆಮಾಚಬೇಕು. ಹಾಗೆ ಮರೆಮಾಚಿದ ಪ್ರತಿ ಮಾತ್ರ ಸಾರ್ವಜನಿಕವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಶುಕ್ರವಾರದೊಳಗೆ (ಪ್ರತಿವಾದಿ) ಪ್ರತಿಕ್ರಿಯಿಸುವಂತೆ ನೋಟಿಸ್‌ ನೀಡಿ. ದೆಹಲಿ ಸರ್ಕಾರಕ್ಕೆ ನೋಟಿಸ್‌ ನೀಡಲು ಸ್ವಾತಂತ್ರ್ಯ ಒದಗಿಸಲಾಗಿದೆ. ದೂರುಗಳನ್ನು ಮೊಹರು ಮಾಡಿದ ಲಕೋಟೆಯಲ್ಲಿಟ್ಟು ಮತ್ತೆ ಮೊಹರು ಮಾಡಿ ಸಂವಿಧಾನದ 32ನೇ ವಿಧಿಗೆ ಸಂಬಂಧಿಸಿದ ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು” ಎಂದು ನ್ಯಾಯಾಲಯ ಆದೇಶಿಸಿದೆ.

ಬಿಜೆಪಿ ಸಂಸದ ಬ್ರಿಜ್ ಭೂಷಣ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕುಸ್ತಿಪಟುಗಳು ದೆಹಲಿಯ ಜಂತರ್‌ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

Related Stories

No stories found.
Kannada Bar & Bench
kannada.barandbench.com