ಒಂಬತ್ತನೇ ತರಗತಿಗೂ ಮುನ್ನವೇ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡಬೇಕು: ಸುಪ್ರೀಂ ಅಭಿಮತ

ಮಕ್ಕಳಲ್ಲಿ ಪ್ರೌಢಾವಸ್ಥೆಯ ನಂತರ (ದೇಹ- ಮನಸ್ಸುಗಳಲ್ಲಿ) ಆಗುವ ಬದಲಾವಣೆಗಳ ಬಗ್ಗೆ ಅರಿವು ಮೂಡಿಸಲು ಅಧಿಕಾರಿಗಳು ತಮ್ಮ ವಿವೇಚನೆ ಬಳಸಿ ಸುಧಾರಣಾ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯ ನುಡಿಯಿತು.
Supreme Court with ‘Sex Education’
Supreme Court with ‘Sex Education’
Published on

ಒಂಬತ್ತನೇ ತರಗತಿಯಿಂದ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವ ಬದಲು ಅವರು ಚಿಕ್ಕ ವಯಸ್ಸಿನಲ್ಲಿದ್ದಾಗಲೇ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಬುಧವಾರ ಅಭಿಪ್ರಾಯಪಟ್ಟಿದೆ [ಕಾನೂನು ಸಂಘರ್ಷಕ್ಕೀಡಾದ ಬಾಲಕ ಮತ್ತು ಉತ್ತರ ಪ್ರದೇಶ ಸರ್ಕಾರ ನಡುವಣ ಪ್ರಕರಣ]

ಬಾಲ್ಯದಿಂದಲೇ ಲೈಂಗಿಕ ಶಿಕ್ಷಣದ ಅಗತ್ಯ ಇದ್ದು ಮಕ್ಕಳಲ್ಲಿ ಪ್ರೌಢಾವಸ್ಥೆಯ ನಂತರ (ದೇಹ- ಮನಸ್ಸುಗಳಲ್ಲಿ) ಆಗುವ ಬದಲಾವಣೆಗಳ ಬಗ್ಗೆ ಅರಿವು ಮೂಡಿಸಲು ಅಧಿಕಾರಿಗಳು ತಮ್ಮ ವಿವೇಚನೆ ಬಳಸಿ ಸುಧಾರಣಾ  ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಅಲೋಕ್‌ ಆರಾಧೆ ಅವರಿದ್ದ ಪೀಠ ಹೇಳಿತು.

Also Read
ಸಮಗ್ರ ಲೈಂಗಿಕ ಶಿಕ್ಷಣ ಯೋಜನೆ ಜಾರಿಗೆ ಸುಪ್ರೀಂ ಕೋರ್ಟ್ ಸಲಹೆ

“ಲೈಂಗಿಕ ಶಿಕ್ಷಣವನ್ನು ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ನೀಡಬೇಕು, ಒಂಬತ್ತನೇ ತರಗತಿಯಿಂದ ಆರಂಭಿಸಬಾರದು ಎಂಬುದು ನಮ್ಮ ಅಭಿಪ್ರಾಯ. ಮಕ್ಕಳಲ್ಲಿ ಪ್ರೌಢಾವಸ್ಥೆಯ ನಂತರ (ದೇಹ- ಮನಸ್ಸುಗಳಲ್ಲಿ) ಆಗುವ ಬದಲಾವಣೆಗಳ ಬಗ್ಗೆ ಹಾಗೂ ಅದಕ್ಕೆ ಸಂಬಂಧಿಸಿದಂತೆ ವಹಿಸಬೇಕಾದ ಕಾಳಜಿ ಮತ್ತು ಎಚ್ಚರಿಕೆ ಬಗ್ಗೆ ತಿಳಿಯುವಂತಾಗಲು ಸಂಬಂಧಪಟ್ಟ ಅಧಿಕಾರಿಗಳು ವಿವೇಚನಾಯುಕ್ತ ಸುಧಾರಣಾ ಕ್ರಮ ಕೈಗೊಳ್ಳಬೇಕು” ಎಂದು ನ್ಯಾಯಾಲಯ ಹೇಳಿತು.

ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆಯ (ಪೋಕ್ಸೊ) ಸೆಕ್ಷನ್ 6 (ತೀವ್ರವಾದ ಲೈಂಗಿಕ ದೌರ್ಜನ್ಯ) ಅಡಿಯಲ್ಲಿ ಅಪರಾಧಗಳ ಆರೋಪ ಹೊತ್ತಿದ್ದ 15 ವರ್ಷದ ಬಾಲಕ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಈ ವಿಚಾರ ತಿಳಿಸಿತು.

ಪ್ರೌಢಾವಸ್ಥೆ ಮತ್ತು ಸಂಬಂಧಿತ ವಿಷಯಗಳ ಬಗ್ಗೆ ಹದಿಹರೆಯದವರಲ್ಲಿ ಜಾಗೃತಿ ಮೂಡಿಸಲು ಪದವಿಪೂರ್ವ ಶಾಲೆಗಳಲ್ಲಿ ಲೈಂಗಿಕ ಶಿಕ್ಷಣವನ್ನು ಹೇಗೆ ನೀಡಲಾಗುತ್ತಿದೆ ಎಂಬುದನ್ನು ವಿವರಿಸುವ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಾಲಯ ಈ ಹಿಂದೆ ಉತ್ತರ ಪ್ರದೇಶ  ಸರ್ಕಾರಕ್ಕೆನಿರ್ದೇಶನ ನೀಡಿತ್ತು.

ಇದಕ್ಕೆ ಅನುಗುಣವಾಗಿ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎನ್‌ಸಿಇಆರ್‌ಟಿ) ನಿರ್ದೇಶನಗಳಿಗೆ ಅನುಗುಣವಾಗಿ ಪ್ರೌಢ ಶಿಕ್ಷಣ ಇಲಾಖೆ IX ರಿಂದ XII ತರಗತಿಗಳಿಗೆ ರೂಪಿಸಿದ ಪಠ್ಯಕ್ರಮ ವಿವರಿಸುವ ಅಫಿಡವಿಟ್ ಅನ್ನು ಸರ್ಕಾರ ಸಲ್ಲಿಸಿತು.

Also Read
ಶಾಲಾ-ಕಾಲೇಜುಗಳ ಪಠ್ಯಕ್ರಮದಲ್ಲಿ ಲೈಂಗಿಕ ಶಿಕ್ಷಣ ಸೇರ್ಪಡೆ: ರಾಜ್ಯ ಸರ್ಕಾರಕ್ಕೆ ಕೇರಳ ಹೈಕೋರ್ಟ್ ಒತ್ತಾಯ

ಆದರೂ ಪ್ರೌಢಾವಸ್ಥೆಯಲ್ಲಿ ಉಂಟಾಗುವ ಬದಲಾವಣೆಗಳ ಬಗ್ಗೆ ಮಕ್ಕಳಿಗೆ ತಿಳಿಸುವುದಕ್ಕಾಗಿ ಅಧಿಕಾರಿಗಳು ಸುಧಾರಣಾ ಕ್ರಮ ಕೈಗೊಳ್ಳಬೇಕು ಎಂದು ಅದು ಹೇಳಿತು. ಅಂತೆಯೇ ಅಲಾಹಾಬಾದ್‌ ಹೈಕೋರ್ಟ್‌ ಆದೇಶ ರದ್ದುಗೊಳಿಸಿದ ಅದು ತಾನು ಈ ಹಿಂದೆ ನೀಡಿದ್ದ ಜಾಮೀನು ಆದೇಶವನ್ನು ಅಖೈರುಗೊಳಿಸಿತು. ವಿಚಾರಣೆ ಮುಕ್ತಾಯಗೊಳ್ಳುವವರೆಗೆ ಜಾಮೀನು ಆದೇಶ ಮಾನ್ಯವಾಗಿ ಇರಲಿದೆ. 

ತನ್ನ ಅವಲೋಕನಗಳು ಜಾಮೀನಿಗೆ ಸೀಮಿತವಾಗಿವೆಯೇ ಹೊರತು ಪ್ರಕರಣದ ಅರ್ಹತೆಗೆ ಸಂಬಂಧಿಸಿಲ್ಲ ಎಂದು ಅದು ಸ್ಪಷ್ಟಪಡಿಸಿತು.

Kannada Bar & Bench
kannada.barandbench.com