

ಆರು ವಕೀಲರನ್ನು ಕರ್ನಾಟಕ ಹೈಕೋರ್ಟ್ ಹೈಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಮಂಗಳವಾರ ಶಿಫಾರಸ್ಸು ಮಾಡಿದೆ.
ನ್ಯಾಯಮೂರ್ತಿಗಳಾಗಿ ನೇಮಿಸಲು ವಕೀಲರಾದ ರಾಘವೇಂದ್ರ ಸೀತಾರಾಂ ಶ್ರೀವಾತ್ಸವ, ಹೇಮಾ ಕುಲಕರ್ಣಿ, ಸುಬ್ರಮಣ್ಯ ರಂಗಾರಾವ್, ಟಿ ಪಿ ವಿವೇಕಾನಂದ, ಬಿ ಪ್ರಮೋದ್ ಮತ್ತು ಶಾಂತಿಭೂಷಣ್ ಅವರ ಹೆಸರುಗಳನ್ನು ಶಿಫಾರಸ್ಸು ಮಾಡಲಾಗಿದೆ.
ಈಚೆಗೆ ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದ್ದು, ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ಹೈಕೋರ್ಟ್‌ನಲ್ಲಿ 62 ನ್ಯಾಯಮೂರ್ತಿಗಳ ಹುದ್ದೆಗಳಿದ್ದು, ಶಿಫಾರಸ್ಸುಗೊಂಡಿರುವ ವಕೀಲರ ಹೆಸರಿಗೆ ಒಪ್ಪಿಗೆ ದೊರೆತರೆ ನ್ಯಾಯಮೂರ್ತಿಗಳ ಸಂಖ್ಯೆ 54 ಕ್ಕೆ ಏರಿಕೆಯಾಗಲಿದೆ.
ಎಚ್ ಶಾಂತಿಭೂಷಣ್ ಅವರು ಸದ್ಯ ಡೆಪ್ಯೂಟಿ ಸಾಲಿಸಿಟರ್ ಜನರಲ್ ಆಗಿ ಕರ್ನಾಟಕ ಹೈಕೋರ್ಟ್‌ನಲ್ಲಿ ಕೇಂದ್ರ ಸರ್ಕಾರದ ಪರವನ್ನು ಪ್ರತಿನಿಧಿಸುತ್ತಿದ್ದಾರೆ.