ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನ್ಯಾ. ಪಿ ಬಿ ವರಾಲೆ ಹೆಸರು ಶಿಫಾರಸ್ಸು ಮಾಡಿದ ಕೊಲಿಜಿಯಂ

ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಪಿ ಬಿ ವರಾಲೆ ಅವರು 1985ರ ಆಗಸ್ಟ್‌ನಲ್ಲಿ ವಕೀಲರಾಗಿ ನೋಂದಾಯಿಸಿಕೊಂಡರು. 2008ರಲ್ಲಿ ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿಗಳಾಗಿ ನೇಮಕಗೊಂಡರು.
Justice PB Varale
Justice PB Varale
Published on

ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಅವರನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸ್ಸು ಮಾಡಿದೆ.

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್‌ ಅವರ ನೇತೃತ್ವದ ಕೊಲಿಜಿಯಂ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ನ್ಯಾ. ವರಾಲೆ ಅವರು 1985ರ ಆಗಸ್ಟ್‌ನಲ್ಲಿ ವಕೀಲರಾಗಿ ನೋಂದಾಯಿಸಿಕೊಂಡರು.

ವೃತ್ತಿಯ ಆರಂಭದಲ್ಲಿ ವಕೀಲರಾದ ಎಸ್‌ ಎನ್‌ ಲೋಯಾ ಅವರ ಬಳಿ ಕಿರಿಯ ವಕೀಲರಾಗಿ ವರಾಲೆ ಪ್ರಾಕ್ಟೀಸ್‌ ಆರಂಭಿಸಿದರು.1992ರವರೆಗೆ ಔರಂಗಾಬಾದ್‌ನ ಅಂಬೇಡ್ಕರ್‌ ಕಾನೂನು ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ಕೆಲಸ ಮಾಡಿದ್ದರು. 2008ರ ಜುಲೈ 18ರಲ್ಲಿ ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕಗೊಂಡರು.

Kannada Bar & Bench
kannada.barandbench.com