ರಾಜಸ್ಥಾನ, ಅಲಾಹಾಬಾದ್, ಗುವಾಹಟಿ, ಜಾರ್ಖಂಡ್ ಹಾಗೂ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು (ಸಿಜೆ) ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ಬಿ ಆರ್ ಗವಾಯಿ ಅವರನ್ನೊಳಗೊಂಡ ಕೊಲಿಜಿಯಂ ಈ ಕುರಿತು ನಿರ್ಣಯಗಳನ್ನು ಅಂಗೀಕರಿಸಿದ್ದು ಗುರುವಾರ ಸಂಜೆ ಅಧಿಕೃತ ಜಾಲತಾಣದಲ್ಲಿ ಮಾಹಿತಿ ಪ್ರಕಟಿಸಲಾಗಿದೆ.
ರಾಜಸ್ಥಾನ ಹೈಕೋರ್ಟ್ ನ್ಯಾಯಮೂರ್ತಿ ಮಣೀಂದ್ರ ಮೋಹನ್ ಶ್ರೀವಾಸ್ತವ ಅವರನ್ನು ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಮತ್ತು ರಾಜಸ್ಥಾನ ಹೈಕೋರ್ಟ್ ನ್ಯಾಯಮೂರ್ತಿ ಅರುಣ್ ಬನ್ಸಾಲಿ ಅವರನ್ನು ಅಲಾಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ.
ರಾಜಸ್ಥಾನ ಹೈಕೋರ್ಟ್ ನ್ಯಾಯಮೂರ್ತಿ ವಿಜಯ್ ಬಿಷ್ಣೋಯ್ ಅವರನ್ನು ಗುವಾಹಟಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ, ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಮೂರ್ತಿ ಶೀಲ್ ನಾಗು ಅವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಸಿಜೆಯಾಗಿ ಹಾಗೂ ಒರಿಸ್ಸಾ ಹೈಕೋರ್ಟ್‌ನ ನ್ಯಾಯಮೂರ್ತಿ ಬಿ.ಆರ್. ಸಾರಂಗಿ ಅವರನ್ನು ಜಾರ್ಖಂಡ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ.
[ಕೊಲಿಜಿಯಂ ನಿರ್ಣಯಗಳನ್ನು ಇಲ್ಲಿ ಓದಿ]