ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಮಾಜಿ ಸಂಸದ ಪ್ರಜ್ವಲ್‌ಗೆ ಕರ್ನಾಟಕ ಹೈಕೋರ್ಟ್ ಕಳೆದ ಅಕ್ಟೋಬರ್‌ನಲ್ಲಿ ಜಾಮೀನು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.
Prajwal Revanna
Prajwal RevannaFacebook
Published on

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ, ಉಚ್ಛಾಟಿತ ಜೆಡಿಎಸ್‌ ಮುಖಂಡ ಪ್ರಜ್ವಲ್‌ ರೇವಣ್ಣಗೆ  ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ನಿರಾಕರಿಸಿದೆ.

ಪೀಠವು ಸಂಕ್ಷಿಪ್ತ ವಿಚಾರಣೆಯ ನಂತರ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠ ಅರ್ಜಿ ವಜಾಗೊಳಿಸಿತು.

Also Read
ಅತ್ಯಾಚಾರ ಪ್ರಕರಣಗಳ ಆರೋಪಿ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್‌

ರೇವಣ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟ್ಗಿ, ಆರೋಪಗಳು ಗಂಭೀರವಾಗಿದ್ದರೂ ದೂರಿನಲ್ಲಿ ಅತ್ಯಾಚಾರದ ನಿರ್ದಿಷ್ಟ ಆರೋಪ ಇಲ್ಲ ಎಂದರು.

ಆದರೆ ಪ್ರಜ್ವಲ್‌ಗೆ ಜಾಮೀನು ನೀಡಲು ಪೀಠ ನಿರಾಕರಿಸಿತು. ಆರು ತಿಂಗಳ ನಂತರ ಅರ್ಜಿ ಸಲ್ಲಿಸಬಹುದೇ ಎಂದು ರೋಹಟ್ಗಿ ಕೇಳಿದಾಗ, "ನಾವು ಏನನ್ನೂ ಹೇಳುವುದಿಲ್ಲ" ಎಂದು ಪೀಠ ಪ್ರತಿಕ್ರಿಯಿಸಿತು.

ಪ್ರಜ್ವಲ್‌ಗೆ ಕರ್ನಾಟಕ ಹೈಕೋರ್ಟ್ ಅಕ್ಟೋಬರ್‌ನಲ್ಲಿ ಜಾಮೀನು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ವಕೀಲ ಬಾಲಾಜಿ ಶ್ರೀನಿವಾಸನ್ ಅವರ ಮೂಲಕ ಮೇಲ್ಮನವಿ ಸಲ್ಲಿಸಲಾಗಿತ್ತು.

Also Read
ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳದ ನಾಲ್ಕು ಪ್ರಕರಣಗಳ ತನಿಖೆ ನಡೆಸುತ್ತಿರುವ ಎಸ್‌ಐಟಿ ಈ ವರ್ಷದ ಆಗಸ್ಟ್ 24 ರಂದು, 2,144 ಪುಟಗಳ ಆರೋಪಪಟ್ಟಿ ಸಲ್ಲಿಸಿತ್ತು. ನಾಲ್ಕು ಪ್ರಕರಣಗಳಲ್ಲಿ ಮೊದಲನೆಯದನ್ನು ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಮನೆಗೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪ್ರಕರಣ ದಾಖಲಿಸಿತ್ತು.

ದೂರುದಾರ- ಸಂತ್ರಸ್ತೆಯನ್ನು ಅಪಹರಿಸಿದ ಆರೋಪದಡಿ ಪ್ರಜ್ವಲ್‌ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ಎತ್ತಿ ಹಿಡಿದಿತ್ತು.

Kannada Bar & Bench
kannada.barandbench.com