ಹಿಂದೂಸ್ತಾನ್ ಝಿಂಕ್ ಬಂಡವಾಳ ಹಿಂತೆಗೆತ: ಕೇಂದ್ರದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ [ಚುಟುಕು]

Justices DY Chandrachud and Surya Kant, Supreme Court

Justices DY Chandrachud and Surya Kant, Supreme Court

Published on

2002ರಲ್ಲಿ ಹಿಂದೂಸ್ತಾನ್ ಜಿಂಕ್ ಲಿಮಿಟೆಡ್ (HZL) ನಲ್ಲಿನ ಶೇ 26ರಷ್ಟು ಬಂಡವಾಳ ಹಿಂಪಡೆಯುವುದಕ್ಕೆ ಸಂಬಂಧಿಸಿದಂತೆ ನಿಯಮಿತ ಪ್ರಕರಣ ದಾಖಲಿಸಲು ಸಿಬಿಐಗೆ ನಿರ್ದೇಶಿಸಿದ ತನ್ನ ಆದೇಶ ಹಿಂಪಡೆಯುವಂತೆ ಕೋರಿದ್ದ ಕೇಂದ್ರ ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ [ನ್ಯಾಷನಲ್ ಕಾನ್ಫೆಡರೇಶನ್ ಆಫ್ ಆಫೀಸರ್ಸ್ ಅಸೋಸಿಯೇಷನ್ ​​ಆಫ್ ಸೆಂಟ್ರಲ್ ಪಬ್ಲಿಕ್ ಸೆಕ್ಟರ್ ಎಂಟರ್‌ಪ್ರೈಸಸ್ ಮತ್ತಿತರರು ಹಾಗೂ ಭಾರತ ಒಕ್ಕೂಟ ಇನ್ನಿತರರ ನಡುವಣ ಪ್ರಕರಣ].

ಈ ನಿರ್ದೇಶನ ಹೊರಡಿಸಲು ನ್ಯಾಯಾಲಯಕ್ಕೆ ಸಾಕಷ್ಟು ಆಧಾರ ಇರುವಾಗ ಸಾಕಷ್ಟು ಆಧಾರ ಇಲ್ಲ ಎಂದು ಹೇಳಿ ಕೇಂದ್ರ ಸರ್ಕಾರ ಅರ್ಜಿಯನ್ನು ಸಲ್ಲಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರಿದ್ದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು.

ಹೆಚ್ಚಿನ ಮಾಹಿತಿಗೆ ʼಬಾರ್‌ ಅಂಡ್‌ ಬೆಂಚ್‌ʼ ಇಂಗ್ಲಿಷ್‌ ತಾಣದ ಲಿಂಕ್‌ ಗಮನಿಸಿ.

Kannada Bar & Bench
kannada.barandbench.com