ಠಾಕೂರ್ ಚಂದ್ರ ಅವರನ್ನು ʼಪರಮಾತ್ಮʼ ಎಂದು ಘೋಷಿಸಲು ಕೋರಿದ್ದ ಪಿಐಎಲ್‌ ವಜಾ: ಭಾರತ ಜಾತ್ಯತೀತ ದೇಶ ಎಂದ ಸುಪ್ರೀಂ

ಭಾರತ ಜಾತ್ಯತೀತ ರಾಷ್ಟ್ರವಾಗಿದ್ದು, ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮೂಲಕ ಇಂತಹ ಕೋರಿಕೆ ಸಲ್ಲಿಸಬಾರದು ಎಂದು ಹೇಳಿದ ಪೀಠ ತಪ್ಪು ಗ್ರಹಿಕೆಯಿಂದ ಕೂಡಿದ ಮನವಿ ಸಲ್ಲಿಸಿದ್ದ ಅರ್ಜಿದಾರರಿಗೆ ₹ 1 ಲಕ್ಷ ದಂಡ ವಿಧಿಸಿತು.
Supreme Court of India
Supreme Court of India

ಸತ್ಸಂಗದ ಸಂಸ್ಥಾಪಕ ಶ್ರೀ ಠಾಕೂರ್ ಅನುಕೂಲ್‌ಚಂದ್ರ ಅವರನ್ನು 'ಪರಮಾತ್ಮ' ಎಂದು ಘೋಷಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಭಾರತ  ಜಾತ್ಯತೀತ ರಾಷ್ಟ್ರವಾಗಿದ್ದು, ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮೂಲಕ ಇಂತಹ ಕೋರಿಕೆ ಸಲ್ಲಿಸಬಾರದು ಎಂದು ಹೇಳಿದ ನ್ಯಾಯಮೂರ್ತಿಗಳಾದ ಎಂ ಆರ್  ಶಾ ಮತ್ತು ಸಿ ಟಿ ರವಿಕುಮಾರ್ ಅವರಿದ್ದ ಪೀಠ ತಪ್ಪು ಗ್ರಹಿಕೆಯಿಂದ ಕೂಡಿದ ಮನವಿ ಸಲ್ಲಿಸಿದ್ದ  ಅರ್ಜಿದಾರರಿಗೆ ₹ 1 ಲಕ್ಷ ದಂಡ ವಿಧಿಸಿತು.

Also Read
ತಾಜ್‌ ಮಹಲ್‌ ಕೊಠಡಿ ತೆರೆಯಲು ಕೋರಿದ್ದ ಪಿಐಎಲ್‌ ವಜಾ ಮಾಡಿದ ಸುಪ್ರೀಂ; 'ಪ್ರಚಾರ ಹಿತಾಸಕ್ತಿ ಅರ್ಜಿ' ಎಂದ ಪೀಠ

"ಹಮ್ ಯೇ ಉಪನ್ಯಾಸ ನಹೀ ಸುನ್ನೆ ಆಯೆ ಹೈಂ. ಹಮ್ ಸೆಕ್ಯುಲರ್ ದೇಶ್ ಹೈಂ. ಪಿಐಎಲ್ ಕಾ ಕೋಯಿ ಮತ್ಲಬ್ ಹೋತಾ ಹೈ. (ಉಪನ್ಯಾಸ ಕೇಳಲು ನಾವಿಲ್ಲ ಬಂದಿಲ್ಲ, ನಮ್ಮದು ಜಾತ್ಯತೀತ ದೇಶ. ಪಿಐಎಲ್‌ ಎಂಬುದಕ್ಕೆ ಅರ್ಥ ಇರುತ್ತದೆ)" ಎಂದು ನ್ಯಾಯಮೂರ್ತಿ ಶಾ ಹೇಳಿದರು. ಉಪೇಂದ್ರನಾಥ್ ದಲೈ ಎಂಬುವವರು ಅರ್ಜಿ ಸಲ್ಲಿಸಿದ್ದರು.

“ಶ್ರೀ ಠಾಕೂರ್ ಅನುಕೂಲ್‌ಚಂದ್ರ ಅವರನ್ನು ತನ್ನ ದೇವರೆಂದು ಪರಿಗಣಿಸಲು ಅರ್ಜಿದಾರರು ಸ್ವತಂತ್ರರಾಗಿದ್ದರೂ, ಅದನ್ನು ಇತರರ ಮೇಲೆ ಹೇರುವಂತಿಲ್ಲ” ಎಂದು ನ್ಯಾಯಾಲಯ ಹೇಳಿದೆ.

"ಭಾರತ ಜಾತ್ಯತೀತ ರಾಷ್ಟ್ರವಾಗಿದ್ದು, ಪಿಐಎಲ್‌ ಮೂಲಕ ಅಂತಹ ಪ್ರಾರ್ಥನೆ ಮಾಡುವಂತಿಲ್ಲ. ಅರ್ಜಿಯನ್ನು ವಜಾಗೊಳಿಸಲಾಗಿದೆ" ಎಂದು ಪೀಠ ಆದೇಶದಲ್ಲಿ ತಿಳಿಸಿದೆ.

Related Stories

No stories found.
Kannada Bar & Bench
kannada.barandbench.com