ದೇಶದ್ರೋಹ ಪ್ರಕರಣ: ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸದ ಕೃಷ್ಣಂ ರಾಜುಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್

ಅರ್ಜಿಯ ಪೂರ್ಣವಾಗಿ ಪರಿಗಣಿಸಿದಾಗ ಮತ್ತು ಇತ್ತೀಚೆಗೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಅರ್ಜಿದಾರರ ಆರೋಗ್ಯ ಸ್ಥಿತಿಯನ್ನು ಗಮನಿಸಿದಾಗ ಜಾಮೀನು ನೀಡುವುದು ಸೂಕ್ತವೆಂದು ಭಾವಿಸಲಾಗಿದೆ ಎಂದು ನ್ಯಾಯಾಲಯ ಆದೇಶಿಸಿದೆ.
ದೇಶದ್ರೋಹ ಪ್ರಕರಣ: ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸದ ಕೃಷ್ಣಂ ರಾಜುಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್
YSR Congress MP Kanumuri Raghurama Krishnam Raju and Supreme Court

ಆಂಧ್ರಪ್ರದೇಶ ಸರ್ಕಾರ ದಾಖಲಿಸಿದ್ದ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಸಂಸದ ಕನುಮುರಿ ರಘುರಾಮ ಕೃಷ್ಣಂ ರಾಜು ಅವರಿಗೆ ಸುಪ್ರೀಂಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ.

ಪೊಲೀಸ್‌ ವಶದಲ್ಲಿದ್ದಾಗ ರಾಜು ಅವರನ್ನು ಕೆಟ್ಟದಾಗಿ ನಡೆಸಿಕೊಂಡಿರುವ ಸಾಧ್ಯತೆ ಇದೆ ಎಂದು ನ್ಯಾಯಮೂರ್ತಿಗಳಾದ ವಿನೀತ್ ಸರಣ್ ಮತ್ತು ಬಿ ಆರ್‌ ಗವಾಯಿ ಅವರಿದ್ದ ರಜಾಕಾಲೀನ ಪೀಠ ಅಭಿಪ್ರಾಯಪಟ್ಟಿತು.

"ಅರ್ಜಿದಾರರ (ರಾಜು) ವಿರುದ್ಧದ ಆರೋಪಗಳನ್ನು ಗಮನಿಸಿದರೆ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಅಗತ್ಯ ಇದೆ ಎನಿಸುವುದಿಲ್ಲ. ಅರ್ಜಿಯನ್ನು ಪೂರ್ಣವಾಗಿ ಪರಿಗಣಿಸಿದಾಗ ಮತ್ತು ಇತ್ತೀಚೆಗೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಅರ್ಜಿದಾರರ ಆರೋಗ್ಯ ಸ್ಥಿತಿಯನ್ನು ಗಣನೆಗೆ ತೆಗೆದುಕೊಂಡಾಗ ಜಾಮೀನು ನೀಡುವುದು ಸೂಕ್ತ ಎಂದು ನಾವು ಭಾವಿಸುತ್ತೇವೆ. " ಎಂದು ಪೀಠ ತಿಳಿಸಿತು.

ಜಾಮೀನು ನೀಡುವ ವೇಳೆ ನ್ಯಾಯಾಲಯ ರಾಜು ಅವರಿಗೆ ತನಿಖೆಗೆ ಸಹಕರಿಸಬೇಕು ಮತ್ತು ತನಿಖಾಧಿಕಾರಿ ಕರೆದಾಗ ಹಾಜರಾಗಬೇಕು. ಪ್ರಕರಣದ ಕುರಿತು ಮುದ್ರಣ, ದೃಶ್ಯ ಅಥವಾ ಇನ್ನಾವುದೇ ಮಾಧ್ಯಮಗಳಿಗೆ ಸಂದರ್ಶನ ನೀಡಬಾರದು ಎಂದು ಷರತ್ತು ವಿಧಿಸಿತು. ರಾಜು 10 ದಿನಗಳ ಒಳಗಾಗಿ 1 ಲಕ್ಷ ರೂಪಾಯಿ ಮೊತ್ತದ ಬಾಂಡ್‌ ಮತ್ತು ಅಷ್ಟೇ ಮೊತ್ತದ ಎರಡು ಜಾಮೀನುಗಳನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಯಾವುದೇ ಪುರಾವೆ ಅಥವಾ ಸಾಕ್ಷ್ಯ ನಾಶ ಮಾಡಬಾರದು ಎಂದು ನಿರ್ದೇಶಿಸಿತು.

Also Read
ದೇಶದ್ರೋಹ ಪ್ರಕರಣದಲ್ಲಿ ಜಾಮೀನು ಕೋರಿ ಸುಪ್ರೀಂಕೋರ್ಟ್ ಮೊರೆ ಹೋದ ವೈಎಸ್ಆರ್ ಕಾಂಗ್ರೆಸ್ ಸಂಸದ ಕೃಷ್ಣಂ ರಾಜು

ಅರ್ಜಿದಾರರ ಪರವಾಗಿ ಹಿರಿಯ ವಕೀಲ ಮುಕುಲ್‌ ರೋಹಟ್ಗಿ, ಆಂಧ್ರಪ್ರದೇಶ ಸರ್ಕಾರದ ಪರವಾಗಿ ಮತ್ತೊಬ್ಬ ಹಿರಿಯ ವಕೀಲ ದುಷ್ಯಂತ್‌ ದವೆ ವಾದ ಮಂಡಿಸಿದರು.

ಕೃಷ್ಣಂ ರಾಜು ಅವರು ಡಿಜಿಟಲ್‌ ವೇದಿಕೆಗಳಲ್ಲಿ ಕೆಲ ಸಮುದಾಯಗಳ ವಿರುದ್ಧ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಆಂಧ್ರದ ಸಿಐಡಿ ಪೊಲೀಸರು ಅವರನ್ನು ಬಂಧಿಸಿದ್ದರು. ಈ ಘಟನೆಗೂ ಕೆಲ ವಾರಗಳ ಹಿಂದೆ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ಪಕ್ಷದ ನೇತಾರ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ ಜಾಮೀನು ಪಡೆದಿದ್ದು ಅವರ ಜಾಮೀನನ್ನು ರದ್ದುಗೊಳಿಸಬೇಕೆಂದು ಕೃಷ್ಣಂ ರಾಜು ಸಿಬಿಐ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.

Related Stories

No stories found.
Kannada Bar & Bench
kannada.barandbench.com