ಅಮರಾವತಿ ಭೂ ಹಗರಣ: ಆಂತರಿಕ ತನಿಖೆ ಬಳಿಕ ನ್ಯಾ. ಎನ್‌ ವಿ ರಮಣ ವಿರುದ್ಧದ ಸಿಎಂ ಜಗನ್‌ ದೂರು ವಜಾ ಮಾಡಿದ ಸುಪ್ರೀಂ

ಸಿಜೆಐ ಎಸ್‌ ಎ ಬೊಬ್ಡೆ ಏಪ್ರಿಲ್‌ 23ರಂದು ನಿವೃತ್ತಿ ಹೊಂದುತ್ತಿದ್ದು, ಮಂಗಳವಾರ ತಮ್ಮ ಉತ್ತರಾಧಿಕಾರಿಯಾಗಿ ನ್ಯಾ. ರಮಣ ಹೆಸರನ್ನು ಶಿಫಾರಸ್ಸು ಮಾಡಿದ್ದು, ನ್ಯಾ. ರಮಣ ಅವರ ವಿರುದ್ಧ ಜಗನ್‌ ಮೋಹನ್‌ ರೆಡ್ಡಿ ದೂರನ್ನು ವಜಾಗೊಳಿಸಿದ್ದಾರೆ.
ಅಮರಾವತಿ ಭೂ ಹಗರಣ: ಆಂತರಿಕ ತನಿಖೆ ಬಳಿಕ ನ್ಯಾ. ಎನ್‌ ವಿ ರಮಣ ವಿರುದ್ಧದ ಸಿಎಂ ಜಗನ್‌ ದೂರು ವಜಾ ಮಾಡಿದ ಸುಪ್ರೀಂ
Jaganmohan Reddy and Supreme Court

ಅಮರಾವತಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎನ್‌ ವಿ ರಮಣ ವಿರುದ್ಧ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್‌ ಜಗನ್‌ ಮೋಹನ್‌ ರೆಡ್ಡಿ ನೀಡಿದ್ದ‌ ದೂರನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಜಗನ್‌ ಮೋಹನ್‌ ರೆಡ್ಡಿ ಮಾಡಿದ ಆರೋಪಗಳನ್ನು ಪರಿಶೀಲಿಸಲು ಆಂತರಿಕ ವಿಧಾನವನ್ನು ಅನುಸರಿಸಲಾಯಿತು ಮತ್ತು ಸೂಕ್ತ ಪರಿಗಣನೆಯ ನಂತರ ದೂರನ್ನು ವಜಾಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.

“ಆಂಧ್ರಪ್ರದೇಶದ ಮುಖ್ಯಮಂತ್ರಿ ಅವರು ಕಳೆದ ವರ್ಷದ ಅಕ್ಟೋಬರ್‌ 6ರಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ದೂರನ್ನು ಪರಿಗಣಿಸಿ, ಆಂತರಿಕ ವಿಧಾನದ ಮೂಲಕ ಪರಿಶೀಲಿಸಿ ಅದನ್ನು ವಜಾಗೊಳಿಸಲಾಗಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಆಂತರಿಕ ವಿಧಾನದ ಮೂಲಕ ಪರಿಶೀಲನೆಗೆ ಒಳಪಡಿಸಲಾದ ಎಲ್ಲಾ ವಿಚಾರಗಳೂ ಸಂಪೂರ್ಣವಾಗಿ ಗೌಪ್ಯವಾಗಿದ್ದು, ಅವುಗಳನ್ನು ಸಾರ್ವಜನಿಕಗೊಳಿಸಲಾಗದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Also Read
ನ್ಯಾಯಮೂರ್ತಿಗಳ ವಿರುದ್ಧದ ತಮ್ಮ ಆರೋಪಕ್ಕೆ ಆತುಕೊಂಡ ಆಂಧ್ರ ಸಿಎಂ ಜಗನ್‌: ಸಿಜೆಐಗೆ ಅಫಿಡವಿಟ್‌ ಸಲ್ಲಿಕೆ

ನ್ಯಾಯಮೂರ್ತಿ ರಮಣ ವಿರುದ್ಧ ಕೆಲವು ಆರೋಪಗಳನ್ನು ಮಾಡಿ ಮುಖ್ಯ ನ್ಯಾಯಮೂರ್ತಿ ಎಸ್‌ ಎ ಬೊಬ್ಡೆ ಅವರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಅಕ್ಟೋಬರ್‌ 6ರಂದು ಪತ್ರ ಬರೆದಿದ್ದರು. ಬಳಿಕ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ನಲ್ಲಿ ತಮ್ಮ ದೂರನ್ನು ಸಲ್ಲಿಸಿದ್ದರು.

ಸಿಜೆಐ ಎಸ್‌ ಎ ಬೊಬ್ಡೆ ಏಪ್ರಿಲ್‌ 23ರಂದು ನಿವೃತ್ತಿ ಹೊಂದುತ್ತಿದ್ದು, ಮಂಗಳವಾರ ತಮ್ಮ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ರಮಣ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದಾರೆ. ಇದೇ ವೇಳೆ ಹಾಲಿ ನ್ಯಾಯಮೂರ್ತಿಗಳ ವಿರುದ್ಧದ ಪತ್ರ ಮುಖೇನ ಸಲ್ಲಿಸಲಾಗಿದ್ದ ದೂರನ್ನೂ ವಜಾಗೊಳಿಸಿದ್ದಾರೆ.

Related Stories

No stories found.
Kannada Bar & Bench
kannada.barandbench.com