
ಪ್ರಸ್ತುತ ಬಿಹಾರ ಸರ್ಕಾರದ ನಿರ್ವಹಣೆಯಲ್ಲಿರುವ ಮಹಾಬೋಧಿ ಮಹಾವೀರ ದೇವಾಲಯವನ್ನು ಬೌದ್ಧರಿಗೆ ಹಸ್ತಾಂತರಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ [ಸುಲೇಖತಾಯಿ ನಳಿನಿತಾಯಿ ನಾರಾಯಣರಾವ್ ಕುಂಭಾರೆ ಮತ್ತು ಭಾರತ ಒಕ್ಕೂಟ ನಡುವಣ ಪ್ರಕರಣ] .
ಸಂವಿಧಾನದ 32ನೇ ವಿಧಿಯಡಿಯಲ್ಲಿ ಸುಪ್ರೀಂ ಕೋರ್ಟ್‌ಗೆ ನೇರವಾಗಿ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸಲಾಗದು ಎಂದು ಹೇಳಿದ ನ್ಯಾಯಮೂರ್ತಿಗಳಾದ ಎಂ ಎಂ ಸುಂದರೇಶ್ ಮತ್ತು ಕೆ ವಿನೋದ್ ಚಂದ್ರನ್ ಅವರಿದ್ದ ಪೀಠ , ಅರ್ಜಿದಾರರಿಗೆ ಪಾಟ್ನಾ ಹೈಕೋರ್ಟ್ ಸಂಪರ್ಕಿಸಲು ಸೂಚಿಸಿ ಮನವಿ ವಜಾಗೊಳಿಸಿತು.
ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿರುವ ಬೌದ್ಧ ದೇವಾಲಯದ ನಿರ್ವಹಣೆಯನ್ನು1949ರ ಬೋಧ್ ಗಯಾ ದೇವಾಲಯ ಕಾಯಿದೆಗೆ ತಿದ್ದುಪಡಿ ತಂದು ಬೌದ್ಧರ ನಂಬಿಕೆ ಮತ್ತು ಧಾರ್ಮಿಕ ಹಕ್ಕುಗಳನ್ನು ಗೌರವಿಸಿ ಅವರಿಗೆ ದೇವಾಲಯ ನಿರ್ವಹಣೆ ಹಸ್ತಾಂತರಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಸುಲೇಖಾತಾಯಿ ನಳಿನಿತಾಯ್ ನಾರಾಯಣರಾವ್ ಕುಂಭಾರೆ ಎಂಬುವವರು ಅರ್ಜಿ ಸಲ್ಲಿಸಿದ್ದರು.