ಚುನಾವಣಾ ಬಾಂಡ್‌ ಸಂಖ್ಯೆಗಳನ್ನೂ ಬಹಿರಂಗಪಡಿಸಬೇಕು: ಎಸ್‌ಬಿಐಗೆ ಸುಪ್ರೀಂ ನೋಟಿಸ್‌

ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಬಹಿರಂಗಪಡಿಸುವಂತೆ ಮಾರ್ಚ್ 11ರಂದು ನ್ಯಾಯಾಲಯ ನೀಡಿದ್ದ ಆದೇಶವನ್ನು ಎಸ್‌ಬಿಐ ಸಂಪೂರ್ಣ ಪಾಲಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಚುನಾವಣಾ ಬಾಂಡ್‌, ಎಸ್‌ಬಿಐ ಹಾಗೂ ಸುಪ್ರೀಂ ಕೋರ್ಟ್
ಚುನಾವಣಾ ಬಾಂಡ್‌, ಎಸ್‌ಬಿಐ ಹಾಗೂ ಸುಪ್ರೀಂ ಕೋರ್ಟ್

ಚುನಾವಣಾ ಬಾಂಡ್‌ಗಳನ್ನು ಗುರುತಿಸಲು ಸಹಾಯ ಮಾಡುವ ಬಾಂಡ್‌ಗಳ ಸಂಖ್ಯೆಗಳನ್ನು ಬಹಿರಂಗಪಡಿಸದ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ (ಎಸ್‌ಬಿಐ) ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್‌ ಶುಕ್ರವಾರ ನೋಟಿಸ್‌ ನೀಡಿದೆ ಜಾರಿ ಮಾಡಿದೆ [ಸಂಪುಟ ಕಾರ್ಯದರ್ಶಿ ಭಾರತ ಒಕ್ಕೂಟ ಮತ್ತಿತರರ ನಡುವಣ ಪ್ರಕರಣ].

ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಬಹಿರಂಗಪಡಿಸುವಂತೆ ಮಾರ್ಚ್ 11ರಂದು ನ್ಯಾಯಾಲಯ ನೀಡಿದ್ದ ಆದೇಶವನ್ನು ಎಸ್‌ಬಿಐ ಸಂಪೂರ್ಣ ಪಾಲಿಸಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ , ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ ಆರ್‌ ಗವಾಯಿ, ಜೆ ಬಿ ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರನ್ನೊಳಗೊಂಡ ಐವರು ಸದಸ್ಯರ ಪೀಠ ಹೇಳಿದೆ.

"ಚುನಾವಣಾ ಬಾಂಡ್‌ ಖರೀದಿಯ ದಿನಾಂಕ, ಖರೀದಿದಾರರ ಹೆಸರು, ಮುಖಬೆಲೆಯ ಎಲ್ಲಾ ವಿವರಗಳು ಲಭ್ಯವಾಗಬೇಕು ಎಂದು ಸಾಂವಿಧಾನಿಕ ಪೀಠ ನೀಡಿದ ತೀರ್ಪಿನಲ್ಲಿ ಸ್ಪಷ್ಟಪಡಿಸಲಾಗಿದೆ. ಎಸ್‌ಬಿಐ ಚುನಾವಣಾ ಬಾಂಡ್ ಸಂಖ್ಯೆಗಳನ್ನು (ಆಲ್ಫಾ ಸಂಖ್ಯಾತ್ಮಕ ಸಂಖ್ಯೆಗಳು) ಬಹಿರಂಗಪಡಿಸಿಲ್ಲ ಎಂಬ ವಾದವಿದೆ. ಎಸ್‌ಬಿಐಗೆ ನೋಟಿಸ್ ಜಾರಿ ಮಾಡಿ. ಸೋಮವಾರದೊಳಗೆ ಪ್ರತಿಕ್ರಿಯಿಸುವಂತೆ ಎಸ್‌ಬಿಐಗೆ ನೋಟಿಸ್ ನೀಡುವಂತೆ ನಾವು ರಿಜಿಸ್ಟ್ರಿಗೆ ನಿರ್ದೇಶನ ನೀಡುತ್ತಿದ್ದೇವೆ" ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ , ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ ಆರ್‌ ಗವಾಯಿ, ಜೆ ಬಿ ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ
ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ , ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ ಆರ್‌ ಗವಾಯಿ, ಜೆ ಬಿ ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ

ಬೇರೆ ಯಾವುದೇ ಪ್ರತಿಗಳಿಲ್ಲದ ಕಾರಣ ಮುಚ್ಚಿದ ಲಕೋಟೆಗಳು / ಪೆಟ್ಟಿಗೆಗಳಲ್ಲಿ ಸಲ್ಲಿಸಿದ ಚುನಾವಣಾ ಬಾಂಡ್‌ ದಾಖಲೆಗಳನ್ನು ಹಿಂತಿರುಗಿಸುವಂತೆ ಮುಖ್ಯ ಪ್ರಕರಣದ ವಿಚಾರಣೆ ವೇಳೆ ನ್ಯಾಯಪೀಠಕ್ಕೆ ಚುನಾವಣಾ ಆಯೋಗ ಮನವಿ ಸಲ್ಲಿಸಿತ್ತು.

ಅದನ್ನು ಹಿಂತಿರುತಿಸಿದ ಬಳಿಕ ತನ್ನ ಜಾಲತಾಣದಲ್ಲಿ ಆ ದಾಖಲೆಗಳನ್ನು ಪ್ರಕಟಿಸಬಹುದಾಗಿದೆ ಎಂದು ಇಸಿಐ ಹೇಳಿತ್ತು. ಇದಕ್ಕೆ ಸಮ್ಮತಿಸಿದ ನ್ಯಾಯಾಲಯ ಮೂಲಪ್ರತಿಗಳನ್ನು ನಕಲುಮಾಡಿಟ್ಟುಕೊಂಡು ಇಸಿಐಗೆ ಹಿಂತಿರುಗಿಸುವಂತೆ ನ್ಯಾಯಾಲಯ ರಿಜಿಸ್ಟ್ರಿಗೆ ನಿರ್ದೇಶಿಸಿತು.

ಈ ವೇಳೆ ಚುನಾವಣಾ ಬಾಂಡ್‌ ಸಂಖ್ಯೆಗಳನ್ನು ಬಹಿರಂಗಪಡಿಸಿಲ್ಲ ಎಂಬುದನ್ನು ಗಮನಿಸಿದ ನ್ಯಾಯಾಲಯ ಎಸ್‌ಬಿಐಗೆ ನೋಟಿಸ್‌ ನೀಡಿತು.

ಯೋಜನೆ ಪಾರದರ್ಶಕವಾಗಿದೆ ಎಂಬ ಕೇಂದ್ರ ಸರ್ಕಾರದ ನಿಲುವನ್ನು ಚುನಾವಣಾ ಬಾಂಡ್ ಯೋಜನೆ ಅಸ್ತಿತ್ವಕ್ಕೆ ಬಂದ ಏಳು ವರ್ಷಗಳ ನಂತರ ಸುಪ್ರೀಂ ಕೋರ್ಟ್‌ ಕೆಲದಿನಗಳ ಹಿಂದೆ ತಿರಸ್ಕರಿಸಿದೆ.

Related Stories

No stories found.
Kannada Bar & Bench
kannada.barandbench.com