ಸಂವಿಧಾನದ 51-ಎ ವಿಧಿಯಲ್ಲಿ ನಿಗದಿಪಡಿಸಿದ ಮೂಲಭೂತ ಕರ್ತವ್ಯಗಳ ಕಡ್ಡಾಯ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ (ಪಿಐಎಲ್) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಅವರ ಸಹಾಯ ಕೋರಿದೆ. ರಂಗನಾಥ್ ಮಿಶ್ರಾ ಮತ್ತು ಕೇಂದ್ರ ಸರ್ಕಾರ ಇನ್ನಿತರರ ನಡುವಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿಗೆ ಅನುಗುಣವಾಗಿ ಯಾವುದೇ ಕ್ರಮ ಕೈಗೊಳ್ಳಲಾಗಿದೆಯೇ ಎಂಬ ಬಗ್ಗೆ ಪ್ರತಿಕ್ರಿಯಿಸಲು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂಎಂ ಸುಂದರೇಶ್ ಅವರಿದ್ದ ಪೀಠ ಕೇಂದ್ರ ಸರ್ಕಾರವನ್ನು ಕೇಳಿದೆ.
“ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸುವುದಕ್ಕಾಗಿ ರಸ್ತೆ ಮತ್ತು ರೈಲು ಮಾರ್ಗಗಳನ್ನು ತಡೆಯುವ ಮೂಲಕ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಸೋಗಿನಲ್ಲಿ ಪ್ರತಿಭಟನಾಕಾರರು ತೋರುತ್ತಿರುವ ಹೊಸ ಕಾನೂನುಬಾಹಿರ ಪ್ರವೃತ್ತಿಯಿಂದಾಗಿ ಮೂಲಭೂತ ಕರ್ತವ್ಯಗಳನ್ನು ಕಡ್ಡಾಯವಾಗಿ ಜಾರಿಗೊಳಿಸುವ ಅಗತ್ಯತೆ ಉದ್ಭವಿಸಿದೆ” ಎಂದು ದುರ್ಗಾದತ್ ಎಂಬುವರು ಸಲ್ಲಿಸಿದ್ದ ಮನವಿಯಲ್ಲಿ ತಿಳಿಸಲಾಗಿತ್ತು.
ಹೆಚ್ಚಿನ ಮಾಹಿತಿಗೆ ʼಬಾರ್ ಅಂಡ್ ಬೆಂಚ್ʼ ಇಂಗ್ಲಿಷ್ ತಾಣದ ಲಿಂಕ್ ಗಮನಿಸಿ.